Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ವತಿಯಿಂದ ಜಯಂತಿ ಕಾರ್ಯಕ್ರಮವನ್ನು ಅಂದು ಬೆಳಗ್ಗೆ 11:00 ಗಂಟೆಗೆ ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಯಂತ್ಯುತ್ಸವ ನಿಮಿತ್ತ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಬೆಳಗ್ಗೆ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಜಿಲ್ಲಾಡಳಿತ ಕಾರ್ಯಕ್ರಮದ ಪೂರ್ವದಲ್ಲಿ ಬೆಳಗ್ಗೆ 9:00 ರಿಂದ 11:00 ಗಂಟೆಯವರೆಗೆ ನಗರದ ಪದವಿ ಮಹಾವಿದ್ಯಾಲಯದಿಂದ ಸುಭಾಷ ವೃತ್ತ, ಶಾಸ್ತ್ರೀ ವೃತ್ತದ ಮಾರ್ಗವಾಗಿ ವಿದ್ಯಾಮಂಗಲ ಕಾರ್ಯಾಲಯದವರೆಗೆ ನಡೆಸುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರವರ ಭಾವಚಿತ್ರದ ಮೆರವಣಿಗೆಗಾಗಿ ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರಾÂಕ್ಟರ್ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ನಿರ್ದೇಶಿಸಿದರು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಅಲ್ಪ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು. ಜಯಂತಿ ಮತ್ತು ಮೆರವಣಿಗೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಪೊಲೀಸ್ ಇಲಾಖೆಗೆ ತಿಳಿಸಲಾಯಿತು. ಕಾರ್ಯಕ್ರಮದ ನೋಡಲ್ ಅಧಿ ಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರನ್ನು ನೇಮಕ ಮಾಡಲಾಯಿತು.
Related Articles
Advertisement