ಚಿಕ್ಕಮಗಳೂರು: ಪೌರ ಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳು ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಸುರಕ್ಷಾ ಸಾಧನಗಳನ್ನು ಧರಿಸಿ ಕೆಲಸ ನಿರ್ವಹಿಸಬೇಕು. ಪೌರ ಕಾರ್ಮಿಕರು ಹಾಗೂ ಸಫಾಯಿ ಕರ್ಮಚಾರಿಗಳು ಕೆಲಸ ನಿರ್ವಹಿಸುವ ವೇಳೆ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಸುರಕ್ಷಾ ಸಾಧನಗಳನ್ನು ಧರಿಸಿ ಕೆಲಸ ನಿರ್ವಹಿಸುವಂತೆ ಅರಿವು ಮತ್ತು ಜಾಗೃತಿ ಮೂಡಿಸಬೇಕೆಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಅವರು ಅ ಧಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ನೇಮಕಾತಿ ನಿಷೇಧ ಮತು ಅವರ ಪುನರ್ವಸತಿ ಅಧಿನಿಯಮ 2013ರನ್ವಯ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಸಮಿತಿ ಎರಡನೇ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್-19 ಸಂದರ್ಭದಲ್ಲಿಯೂ ಪೌರ ಕಾರ್ಮಿಕರು ಹಾಗೂ ಸಫಾಯಿ ಕರ್ಮಚಾರಿಗಳು ಹಗಲಿರುಳು ಕ್ವಾರಂಟೈನ್ ಕೇಂದ್ರಗಳನ್ನು ಸ್ವತ್ಛಗೊಳಿಸುವುದು, ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ನೆರವಾಗುವುದು, ನಗರ, ಪಟ್ಟಣ ಪ್ರದೇಶಗಳಲ್ಲಿ ಔಷ ಧ ಸಿಂಪಡಣೆ ಸೇರಿದಂತೆ ವಿವಿಧ ಕಾರ್ಯಗಳ ಮೂಲಕ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಆರೋಗ್ಯ
ಹಿತಕಾಪಾಡುವ ನಿಟ್ಟಿನಲ್ಲಿ ನುರಿತ ವೈದ್ಯರಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಸಾಮಾನ್ಯ ಆರೋಗ್ಯ ತಪಾಸಣೆ ಹಾಗೂ 15 ದಿನಗಳಿಗೊಮ್ಮೆ ಕೊರೊನಾ ಪರೀಕ್ಷೆ ನಡೆಸುವಂತೆ ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್. ಅಕ್ಷಯ್, ಅಪರ ಜಿಲ್ಲಾಧಿಕಾರಿ ಡಾ| ಕುಮಾರ್, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಡಾ|ಎಚ್.ಎಲ್. ನಾಗರಾಜ್, ನಗರಸಭೆ ಪೌರಾಯುಕ್ತ ಬಸವರಾಜ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಭರತ್, ಜಿಲ್ಲಾ ಜಾಗೃತ ಸಮಿತಿ ಅಧ್ಯಕ್ಷ ಕೆ.ಟಿ. ರಾಧಾಕೃಷ್ಣ ಹಾಗೂ ಪರಿಸರ ಅಭಿಯಂತರ ರಕ್ಷತ್ ಮತ್ತಿತರರು ಇದ್ದರು.