Advertisement

15ರಂದು ಕಾಂಗ್ರೆಸ್‌ನಿಂದ ನವ ಸಂಕಲ್ಪ ಶಿಬಿರ

05:08 PM Jul 12, 2022 | Team Udayavani |

ಬಾಗಲಕೋಟೆ: ಕಾಂಗ್ರೆಸ್‌ ಪಕ್ಷದಿಂದ ಜಿಲ್ಲಾ ಮಟ್ಟದ ನವಸಂಕಲ್ಪ ಚಿಂತನಾ ಶಿಬಿರವನ್ನು ಜು.15ರಂದು ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ಹೇಳಿದರು.

Advertisement

ಸೋಮವಾರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10:30ಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಬಿರ ಉದ್ಘಾಟಿಸಲಿದ್ದು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಜಿಲ್ಲೆಗೆ ಸಂಬಂಧಿಸಿದ ಐದು ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಪಕ್ಷ ಸಂಘಟನೆ, ಸಾಮಾಜಿಕ ಜಾಲ ಸಬಲೀಕರಣ, ಮಹಿಳಾ ವಿಭಾಗದ ಸಂಘಟನೆ, ಮುಳುಗಡೆ ಸಮಸ್ಯೆ, ಯುಕೆಪಿ ಕುರಿತು ಚರ್ಚಿಸಲಾಗುವುದು ಎಂದರು.

ಸಂಜೆ 5ಕ್ಕೆ ನಡೆಯಲಿರುವ ಶಿಬಿರ ಸಮಾರೋಪ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ಮಾಜಿ ಸಚಿವ ಎಸ್‌.ಆರ್‌. ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಎಂ. ನಾಗಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೀಣಾ ಕಾಶಪ್ಪನವರ, ಎಂ.ಎಚ್‌. ಚಲವಾದಿ ಮುಂತಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಿಂದ 35 ಜನರಂತೆ ಒಟ್ಟು 350 ಜನ ಕಾರ್ಯಕರ್ತರು ಶಿಬಿರದಲ್ಲಿ ಪಾಲ್ಗೊಳ್ಳುವರು ಎಂದರು.

Advertisement

ಮಾಜಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಸಂತ್ರಸ್ತರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಲು ಹಿಂದೇಟು ಹಾಕಿದೆ. ಮುಳುಗಡೆ ಸಂತ್ರಸ್ತರಿಗೆ ಪುನರ್‌ ವಸತಿ ಕಲ್ಪಿಸುವಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ದೂರಿದರು.

ಮಾಜಿ ಸಚಿವ ಎಚ್‌.ವೈ. ಮೇಟಿ ಮಾತನಾಡಿ, ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಬಾಗಲಕೋಟೆಗೆ ಮಂಜೂರ ಮಾಡಿದ ಸರ್ಕಾರಿ ಮೆಡಿಕಲ್‌ ಕಾಲೇಜು ಇನ್ನೂ ಜಾರಿಗೊಂಡಿಲ್ಲ. ಕಾಲೇಜು ಆರಂಭವಾದರೆ ಬಡಮಕ್ಕಳಿಗೆ ವೈದ್ಯಕೀಯ ಶಿಕ್ಷಣ ದೊರೆಯುತ್ತದೆ. ಅದರ ಕಡೆ ಸರ್ಕಾರ ಹೆಚ್ಚು ಗಮನ ಹರಿಸಲಿ ಎಂದು ಹೇಳಿದರು.

ಮಾಧ್ಯಮ ವಕ್ತಾರ ನಾಗ ರಾಜ ಹದ್ಲಿ, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಆನಂದ ಶಿಲ್ಪಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next