Advertisement

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

10:22 AM Mar 27, 2024 | Team Udayavani |

ದಾವಣಗೆರೆ: ಮಹಿಳೆಯರಿಗೆ ರಾಜಕೀಯದಲ್ಲಿ ಶೇ.33 ರಷ್ಟು ಮೀಸಲಾತಿ ನೀಡುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಹಿಳಾ ಶಕ್ತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.

Advertisement

ಮಂಗಳವಾರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಚಾರ ಕಾರ್ಯ ನಡೆಸಿದ ಅವರು, ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಶೇ.33 ರಷ್ಟು ಮೀಸಲಾತಿ ನೀಡಿರುವ ಪರಿಣಾಮ ನಾನೊಬ್ಬ ಮಹಿಳಾ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗಿದೆ. ಪ್ರಧಾನಿ ಮೋದಿಯವರು ಹೆಣ್ಣುಮಕ್ಕಳ ಶಿಕ್ಷಣ, ಮಹಿಳಾ ಸ್ವಾವಲಂಬನೆಗೆ ಸಾಕಷ್ಟು ಯೋಜನೆ ಜಾರಿಗೊಳಿಸಿದ್ದಾರೆ. ಬೇಟಿ ಬಚಾವೋ, ಬೇಟಿ ಪಢಾವೋ ಮೂಲಕ ಕೋಟ್ಯಂತರ ಹೆಣ್ಣು ಮಕ್ಕಳ ಪಾಲಿಗೆ ಆಶಾಕಿರಣವಾಗಿದ್ದಾರೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರು ಕೋಟ್ಯಂತರ ರೂ. ಅನುದಾನ ತಂದಿದ್ದಾರೆ. ಬಿಜೆಪಿ ಇಷ್ಟು ವರ್ಷ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್‌ ಕಾರ್ಡ್‌ ಬಿಡುಗಡೆ ಮಾಡಲಾಗಿದೆ. ಇದುವರೆಗೂ ಪಾರದರ್ಶಕ ಆಡಳಿತ ನೀಡಿದ್ದಕ್ಕೆ ಲೋಕಸಭಾ ಕ್ಷೇತ್ರದ ಮತದಾರರು ನಮ್ಮನ್ನು ಆರಿಸಿ ಲೋಕಸಭೆಗೆ ಕಳುಹಿಸಿದ್ದಾರೆ. ಈ ಬಾರಿಯೂ ನನಗೆ ಮತ ನೀಡುವ ಮೂಲಕ ಅಭಿವೃದ್ಧಿ ಮತ್ತು ಪಾರದರ್ಶಕ ಆಡಳಿತಕ್ಕೆ ಮತ್ತೂಮ್ಮೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಹೊಸ ಬೆಳವನೂರು ಗ್ರಾಮದ ಗಣಪತಿ, ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಗ್ರಾಮದ ಬೂತ್‌ ಅಧ್ಯಕ್ಷ ತಿಪ್ಪೇಸ್ವಾಮಿ, ಜೆಡಿಎಸ್‌ ಮುಖಂಡ ನಾಗೇಶ್ವರರಾವ್‌ ನಿವಾಸಕ್ಕೆ ಭೇಟಿ ನೀಡಿ, ಉಭಯ ಕುಶಲೋಪರಿ ವಿಚಾರಿಸಿದರು.ಹೊಸ ತುರ್ಚಘಟ್ಟ ಗ್ರಾಮದಲ್ಲಿ ತೆರೆದ ವಾಹನದಲ್ಲಿ ಪ್ರಚಾರ ನಡೆಸಿದರು.

ಬಿಜೆಪಿ ಮುಖಂಡರಾದ ಗಂಗಮ್ಮ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಕೈದಾಳೆ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಬಳಿಕ ಗ್ರಾಮದಲ್ಲಿ ಮತಯಾಚನೆ ಮಾಡಿದರು. ಗ್ರಾಮದ ಬೂತ್‌ ಅಧ್ಯಕ್ಷ ಕೇಶವಮೂರ್ತಿ, ಮುಖಂಡರಾದ ಮಲ್ಲಿಕಾರ್ಜುನ್‌ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

Advertisement

ಕುಕ್ಕುವಾಡ, ಹೊಸಕೊಳೇನಹಳ್ಳಿ, ನಾಗರಸನಹಳ್ಳಿ, ಕನಗೊಂಡನಹಳ್ಳಿ, ಹದಡಿ, ಮುದಹದಡಿ, ಜರೇಕಟ್ಟೆ, ನಾಗನೂರು ಸೇರಿದಂತೆ 15 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ಪ್ರತಿ ಗ್ರಾಮಕ್ಕೆ ಭೇಟಿ ನೀಡಿದಾಗ ಬೂತ್‌ ಅಧ್ಯಕ್ಷರು, ಸಾಮಾನ್ಯ ಕಾರ್ಯಕರ್ತರ, ಜೆಡಿಎಸ್‌ ಮುಖಂಡರ, ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ ಚರ್ಚಿಸಿದರು.

ಜೆಡಿಎಸ್‌ ಹಿರಿಯ ಮುಖಂಡ ನಾಗೇಶ್ವರರಾವ್‌, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್‌ ದಾಸಕರಿಯಪ್ಪ, ವಿಜಯ್‌ ಕುಮಾರ್‌, ಗುರುಪ್ರಸಾದ್‌, ಗುರುಮೂರ್ತಿ, ಆನಂದ್‌ ರಾವ್‌ ಸಿಂಧೆ, ರಾಜು ನೀಲಗುಂದ, ಆರ್‌. ಎಲ್‌.ಶಿವಪ್ರಕಾಶ್‌ ಇತರರು ಇದ್ದರು.

ಹೊಸಬೆಳವನೂರಲ್ಲಿ ಗಾಯತ್ರಿ ಸಿದ್ದೇಶ್ವರ ಪ್ರಚಾರ

ದಾವಣಗೆರೆ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹೊಸ ಬೆಳವನೂರು ಗ್ರಾಮದಲ್ಲಿ ಪ್ರಚಾರ ನಡೆಸಿದರು.

ಗ್ರಾಮಸ್ಥರು ಗಾಯತ್ರಿ ಸಿದ್ದೇಶ್ವರ್‌ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಗ್ರಾಮದ ಗಣಪತಿ ಮತ್ತು ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಗಾಯತ್ರಿ ಸಿದ್ದೇಶ್ವರ್‌ ಅವರು ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು.

ಮಾಜಿ ಅಧ್ಯಕ್ಷ ಯಶವಂತ್‌ ರಾವ್‌ ಜಾಧವ್‌, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಎಸ್‌.ಟಿ. ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸ್‌ ಕರಿಯಪ್ಪ, ವಿಜಯ್‌ ಕುಮಾರ್‌ ಗುರುಪ್ರಸಾದ್‌, ಕೈದಾಳ್‌ ಶ್ರೀನಿವಾಸ್‌, ತುರ್ಚಘಟ್ಟ ಶಿವಮೂರ್ತಿ, ಆನಂದ್‌ ರಾವ್‌ ಸಿಂಧೆ, ಬಾಲಚಂದ್ರ, ಶಿವನಗೌಡ ಪಾಟೀಲ್‌, ಹನುಮಂತಪ್ಪ, ರುದ್ರೇಗೌಡ ತಿಪ್ಪೇಸ್ವಾಮಿ, ಬಸವಂತಪ್ಪ, ಅರುಣ್‌ ಕುಮಾರ್‌, ಹೂಸ ಬೆಳವನೂರು ಗ್ರಾಮದ ಬಿಜೆಪಿ ಮುಖಂಡರು ಗ್ರಾಮಸ್ಥರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next