Advertisement
ಘಟಕದ ಕುಪ್ಪೆಪದವು ವಲಯ ಕಾರ್ಯದರ್ಶಿ ವಸಂತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಕಾರ್ಮಿಕ ಮಂಡಳಿಯಲ್ಲಿ ಆಗುತಿರುವ ಭ್ರಷ್ಟಾಚಾರ ಹಾಗೂ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕಾರ್ಮಿಕರು ಸಂಘಟಿತರಾಗಿ ಹೋರಾಟ ಮಾಡುವುದು ಅನಿವಾರ್ಯ ಎಂದರು.
Related Articles
Advertisement
ಕುಪ್ಪೆಪದವು ವಲಯಾಧ್ಯಕ್ಷ ದಿನೇಶ್ ಇರುವೈಲು, ಮುಚ್ಚಾರು ಸಮಿತಿ ಅಧ್ಯಕ್ಷ ಆನಂದ ದೇವಾಡಿಗ, ಕಾರ್ಯದರ್ಶಿ ರವೀಂದ್ರ ಶೆಟ್ಟಿಗಾರ್, ಮಿಜಾರು ಘಟಕದ ಅಧ್ಯಕ್ಷ ಪುತ್ತು ಗೌಡ, ಕೋಶಾಧಿಕಾರಿ ಜನಾರ್ಧನ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಘಟಕದ ಕಾರ್ಯದರ್ಶಿ ಗಣೇಶ್ ಕಾಪಿಕಾಡು ಸ್ವಾಗತಿಸಿ, ವರದಿ ಮಂಡಿಸಿದರು. ಕೋಶಾಧಿಕಾರಿ ಇಬ್ರಾಹಿಂ ಲೆಕ್ಕಪತ್ರ ಮಂಡಿಸಿದರು. ರಾಘವ ವಂದಿಸಿದರು.
ನೈಜ ಕಟ್ಟಡ ಕಾರ್ಮಿಕರು ಬಲಿಪಶು
ರಾಜ್ಯದಲ್ಲಿ 2007ರಿಂದ ಅಸ್ತಿತ್ವದಲ್ಲಿರುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಮಿಕರಿಗಾಗಿ 19 ಸೌಲಭ್ಯಗಳನ್ನು ಘೋಷಿಸಿದೆ. ಇದರಲ್ಲಿ 11 ಸೌಲಭ್ಯಗಳು ಮಾತ್ರವೇ ಜಾರಿಯಾಗಿವೆ. ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣ, ಮದುವೆ, ಆರೋಗ್ಯ, ಅಪಘಾತ, ಸಹಜ ಮರಣ, ಹೆರಿಗೆ ಸಂಧರ್ಭ ದೊರೆಯುವ ಸೌಲಭ್ಯಗಳು ಜಾರಿಯಲ್ಲಿವೆ. ಇತ್ತೀಚೆಗೆ ಕಲ್ಯಾಣ ಮಂಡಳಿಯು ಬೋಗಸ್ ಕಾರ್ಡ್ ನಿಯಂತ್ರಣಕ್ಕಾಗಿ ಹಲವು ಬಿಗಿ ಕ್ರಮಗಳನ್ನು ಕೈಗೊಂಡಿದೆ. ಇದು ಸ್ವಾಗತಾರ್ಹ ಆದರೆ ಬೋಗಸ್ ಕಾರ್ಡ್ ನಿಯಂತ್ರಣದ ನೆಪದಲ್ಲಿ ಸಾವಿರಾರು ನೈಜ ಕಟ್ಟಡ ಕಾರ್ಮಿಕರು ಬಲಿಪಶುವಾಗುತ್ತಿದ್ದಾರೆ. ನೋಂದಣಿ, ನವೀಕರಣ ಹಾಗೂ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ ಎಂದು ಯೋಗೀಶ್ ಜಪ್ಪಿನಮೊಗರು ತಿಳಿಸಿದರು.