Advertisement

ಪ್ರಚಾರ- ಪ್ರವಾಸ ಕುರಿತು ಚರ್ಚೆ

12:14 PM Mar 25, 2019 | Lakshmi GovindaRaju |

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮಂಗಳವಾರ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಚುನಾವಣಾ ಪ್ರಚಾರ, ಪ್ರವಾಸ ಕುರಿತಂತೆ ಭಾನುವಾರ ಸುದೀರ್ಘ‌ ಚರ್ಚೆ ನಡೆಸಿದರು.

Advertisement

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಜೆ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಭಾರಿ ಪಿ.ಮುರಳೀಧರರಾವ್‌, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಆರ್‌.ಅಶೋಕ್‌ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಯಾರೆಲ್ಲಾ ನಾಯಕರು ಪ್ರಚಾರಕ್ಕೆ ತೆರಳಿದರೆ ಅನುಕೂಲ.

ಅಭ್ಯರ್ಥಿಗಳ ಘೋಷಣೆ ಬಳಿಕ ಕೆಲ ಕ್ಷೇತ್ರಗಳಲ್ಲಿ ತಲೆದೋರಿರುವ ಅಸಮಾಧಾನವನ್ನು ಹೇಗೆ ಉಪಶಮನಗೊಳಿಸಬೇಕು. ಯಾವ ನಾಯಕರು ವೈಯಕ್ತಿಕವಾಗಿ ಭೇಟಿ ಮಾಡಿ ಪರಿಹರಿಸಬೇಕು ಎಂಬ ಬಗ್ಗೆಯೂ ವಿಚಾರ ಮಂಥನ ನಡೆಯಿತು ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಪ್ರವಾಸಕ್ಕೆ ಸಂಬಂಧಪಟ್ಟಂತೆ ಕರಡು ವೇಳಾಪಟ್ಟಿ ಸಿದ್ಧಗೊಳಿಸಲಾಗಿದೆ. ಪಕ್ಷದ ವರಿಷ್ಠರೊಂದಿಗೂ ಚರ್ಚಿಸಿ ಪ್ರಧಾನಿ ನರೇಂದ್ರ ಮೋದಿಯವರು ಸೇರಿದಂತೆ ಇತರೆ ರಾಷ್ಟ್ರೀಯ ನಾಯಕರ ಪ್ರವಾಸಕ್ಕೆ ಅನುಗುಣವಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next