Advertisement

Campaign; ಉಡುಪಿ-ಚಿಕ್ಕಮಗಳೂರು: ಸಿದ್ದರಾಮಯ್ಯ/ ಡಿಕೆಶಿ, ಯೋಗಿ ಆಗಮನ ನಿರೀಕ್ಷೆ

01:18 AM Apr 12, 2024 | Team Udayavani |

ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆ ಪ್ರಚಾರ ಪ್ರಕ್ರಿಯೆ ದಿನೇದಿನೇ ರಂಗೇರುತ್ತಿದ್ದು, ರಾಜ್ಯ ಮತ್ತು ರಾಷ್ಟ್ರ ನಾಯಕರು ಎರಡೂ ಪಕ್ಷದ ಪ್ರಚಾರದಲ್ಲಿ ಕೂಡಿಕೊಳ್ಳಲಿದ್ದಾರೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎ. 16ರಂದು ಜಿಲ್ಲೆಗೆ ಆಗಮಿಸುವ ಸಾಧ್ಯತೆಯಿದ್ದು, ಜಿಲ್ಲಾ ಕಾಂಗ್ರೆಸ್‌ನಿಂದ ದೊಡ್ಡ ಮಟ್ಟದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಎ. 16ರ ಅನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಜಿಲ್ಲೆಗೆ ಆಗಮಿಸುವ ಸಾಧ್ಯತೆಯಿದ್ದು, ಕುಂದಾಪುರ ಅಥವಾ ಉಡುಪಿ ನಗರದಲ್ಲಿ ಬೃಹತ್‌ ಸಮಾವೇಶಕ್ಕೆ ಬಿಜೆಪಿ ಯೋಜಿಸುತ್ತಿದೆ. ಚುನಾವಣೆ ಪ್ರಚಾರ ಸಂಬಂಧ ದೊಡ್ಡ ಸಮಾವೇಶದ ಬದಲಿಗೆ ಕಾರ್ನರ್‌ ಸಭೆಗಳಿಗೆ ಎರಡು ಪಕ್ಷಗಳು ಆದ್ಯತೆ ನೀಡುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next