ತೆಕ್ಕಟ್ಟೆ (ಬೀಜಾಡಿ): ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯನ್ನು ಮಾಡಿಸಿಕೊಳ್ಳುವುದರ ಮೂಲಕ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಪ್ರತಿ ಪಂಚಾಯತ್‌ನಿಂದ ಕಾರ್ಮಿಕ ನಿಧಿಗೆ ಒಂದಷ್ಟು ಹಣ ಸಂದಾಯವಾಗುತ್ತಿದ್ದು, ಅದನ್ನು ಕಾರ್ಮಿಕರು ಸರಿಯಾಗಿ ಬಳಸಿಕೊಳ್ಳಲು ಮಾಹಿತಿಯ ಕೊರತೆ ಇದ್ದು ಪ್ರಸ್ತುತ ದಿನಗಳಲ್ಲಿ ಇಂತಹ ಶಿಬಿರಗಳ ಮೂಲಕ ಕಾರ್ಮಿಕರಲ್ಲಿ ಜಾಗƒತಿ ಮೂಡಿದೆ ಎಂದು ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾಕು ಹೇಳಿದರು.
ಅವರು ಭಾನುವಾರ ಬೀಜಾಡಿ ಮಿತ್ರಸೌಧದಲ್ಲಿ ಬೀಜಾಡಿ ಗ್ರಾಮ ಪಂಚಾಯತ್, ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಆಶ್ರಯದಲ್ಲಿ ನಡೆದ ಕಟ್ಟಡ ಕಾರ್ಮಿಕರ ನೋಂದಣಿ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೀಜಾಡಿ ಗ್ರಾಮ ಪಂಚಾಯತ್‌ನ ಹಿರಿಯ ಸದಸ್ಯ ಶೇಖರ ಛಾತ್ರಬೆಟ್ಟು ಇವರು ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ನಿರಂತರ ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ನಾಯ್ಕ ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬೀಜಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಂತಿ ಗಾಣಿಗ, ಸದಸ್ಯರಾದ ಬಿ.ವಾದಿರಾಜ ಹೆಬ್ಟಾರ್,ಧನಂಜಯ ಅರಸ್, ಜಸಿಂತಾ ಡಿ.ಮೆಲ್ಲೋ ಮೊದಲಾದವರು ಉಪಸ್ಥಿತರಿದ್ದರು.
ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ ಬಿ.ಜಿ. ನಾಗರಾಜ ಸ್ವಾಗತಿಸಿ, ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಶ್ರೀಕಾಂತ ಭಟ್ ವಂದಿಸಿದರು.