Advertisement

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

12:16 AM Jul 03, 2024 | Team Udayavani |

ಮಂಗಳೂರು: ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕ್ಯಾಂಪ್ಕೊ ಮನವಿ ಮಾಡಿದೆ.

Advertisement

ಮುಖ್ಯವಾಗಿ ಅಡಿಕೆಯ ಮೇಲಿನ ಜಿಎಸ್‌ಟಿಯನ್ನು ಶೇ. 5ರಿಂದ ಶೇ. 2ಕ್ಕೆ ಇಳಿಸಬೇಕು. ಇದರಿಂದ ರೈತರು ಸಹಕಾರಿ ಸಂಸ್ಥೆಗಳಲ್ಲಿ ವ್ಯವಹರಿಸಲು ಉತ್ತೇಜನ ಸಿಗಲಿದೆ. ತೆರಿಗೆ ಕಳ್ಳತನಕ್ಕೆ ಕಡಿವಾಣ ಬೀಳಲಿದ್ದು ಸರಕಾರಕ್ಕೆ ತೆರಿಗೆಯ ಆದಾಯ ಹೆಚ್ಚಾಗಲಿದೆ. ಸಿಜಿಎಸ್‌ಟಿ, ಎಸ್‌ಜಿಎಸ್‌ಟಿ ಮತ್ತು ಐಜಿಎಸ್‌ಟಿ ಮುಂತಾದ ಬಹುಸ್ಥರದ ತೆರಿಗೆಯ ಬದಲು ಸರಳ ಮತ್ತು ಏಕೀಕೃತ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿ ಸರಳಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಮೈಲುತುತ್ತು ಮೇಲಿನ ಜಿಎಸ್‌ಟಿಯನ್ನೂ ಶೇ. 18ರಿಂದ ಶೇ. 5ಕ್ಕೆ ಇಳಿಸಬೇಕು, ಕಾರ್ಬನ್‌ ಫೈಬರ್‌ ದೋಟಿಯ ಆಮದು ಸುಂಕವನ್ನು ಕಡಿತಗೊಳಿಸಬೇಕು. ಈ ಉತ್ಪನ್ನದ ಮೇಲೆ ಸರಾಸರಿ ಶೇ. 48 ಆಮದು ಸುಂಕ ವಿ ಧಿಸಲಾಗುತ್ತಿದೆ. ಇದರಿಂದ ಸಾಮಾನ್ಯ ರೈತರಿಗೆ ಇದು ಕೈಗೆಟುಕುತ್ತಿಲ್ಲ. ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದನ್ನು ತಡೆಗಟ್ಟಬೇಕು. ವಶಪಡಿಸಿಕೊಂಡ ಅಕ್ರಮ ಆಮದು ಅಡಿಕೆಗೆ ಕನಿಷ್ಠ ಬೆಲೆ ನಿಗದಿ ಪಡಿಸಬೇಕು. ಎಲ್ಲ ದೊಡ್ಡ ಸರಕು ವಾಹನಗಳಿಗೆ ಜಿಪಿಎಸ್‌ ಅಳವಡಿಸಬೇಕು ಮತ್ತು ತಪಾಸಣ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕೆಮರಾ ಅಳವಡಿಸಿ ತಪಾಸಣೆ ನಡೆಸಿ ಅಕ್ರಮ ವ್ಯವಹಾರ ತಡೆಯಬೇಕು.

ಅಡಿಕೆ ಹಲವಾರು ಔಷ ಧೀಯ ಗುಣಗಳನ್ನು ಹೊಂದಿದ್ದು, ದೇಶದಲ್ಲಿ ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ಜನರ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಹಾಗಾಗಿ ಅಡಿಕೆಯ ವಿವಿಧ ಉಪಯೋಗಗಳ ಅನ್ವೇಷಣೆಗೆ ಮತ್ತು ಅಡಿಕೆಗೆ ಬಾ ಧಿಸುತ್ತಿರುವ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಶೋಧನೆ ನಡೆಸಲು ಸಾಕಷ್ಟು ಹಣ ಬಿಡುಗಡೆ ಮಾಡಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಮನವಿಯಲ್ಲಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next