Advertisement

ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕರೆ ನಿಭಾಯಿಸುತ್ತೇನೆ

11:29 PM Jun 19, 2019 | Team Udayavani |

ಲಿಂಗಸುಗೂರು: “ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿದ್ದೇನೆ. ಒಂದು ವೇಳೆ ಜವಾಬ್ದಾರಿ ಕೊಟ್ಟರೆ ನಾನು ಸಮರ್ಥವಾಗಿ ನಿಭಾಯಿಸುವೆ. ಇಲ್ಲದಿದ್ದರೆ ಬಿಜೆಪಿ ಸದಸ್ಯನಾಗಿರುವೆ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

Advertisement

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಆಪರೇಷನ್‌ ಕಮಲ’ಕ್ಕೆ ಕೈ ಹಾಕದಂತೆ ಬಿಜೆಪಿ ಹೈಕಮಾಂಡ್‌ ಸ್ಪಷ್ಟ ಸೂಚನೆ ನೀಡಿದೆ. ಸಮ್ಮಿಶ್ರ ಸರ್ಕಾರದ ಎರಡು ಪಕ್ಷಗಳ ಮುಖಂಡರ ಕಚ್ಚಾಟದಿಂದ ಸರ್ಕಾರ ಬಿದ್ದು ಹೋಗುತ್ತದೆ. ಹೀಗಾಗಿ, ಬಿಜೆಪಿ ಸರ್ಕಾರ ರಚನೆಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದರು.

ಸಮ್ಮಿಶ್ರ ಸರ್ಕಾರದ ಕಚ್ಚಾಟದಿಂದಾಗಿ ಅಭಿವೃದ್ಧಿ ವಿಷಯದಲ್ಲಿ ಉತ್ತರ ಕರ್ನಾಟಕ ಸಂಪೂರ್ಣ ನಿರ್ಲಕ್ಷಕ್ಕೊಳಗಾಗಿದೆ. ಸಿಎಂ ಕುಮಾರಸ್ವಾಮಿ ಅವರು ಒಂದು ವರ್ಷದಿಂದ ಫೈವ್‌ಸ್ಟಾರ್‌ ಹೋಟೆಲ್‌ನಲ್ಲಿ ತಂಗಿದ್ದರು. ಅದರ ಖರ್ಚು ವೆಚ್ಚವನ್ನು ಸರ್ಕಾರದ ಬೊಕ್ಕಸದಿಂದ ಭರಿಸಿ ಸರ್ಕಾರಕ್ಕೆ ಹೊರೆ ಮಾಡಿದ್ದಾರೆ. ಈಗ ಶಾಲೆ, ಗ್ರಾಮದಲ್ಲಿ ವಾಸ್ತವ್ಯ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆಯಲ್ಲಿ ಇವರಿಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ. ನಿಖೀಲ್‌ ಸೋಲಿನಿಂದಾಗಿ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ಕೊಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next