Advertisement

H D Kumaraswamy; ಮಾನವ ಸರಪಳಿಯಿಂದ ಪ್ರಜಾಪ್ರಭುತ್ವವನ್ನು ಕಾಪಾಡಬಹುದೇ?

06:35 PM Sep 16, 2024 | Team Udayavani |

ಬೆಂಗಳೂರು: ‘ಬೃಹತ್ ಮಾನವ ಸರಪಳಿಯಿಂದ ಪ್ರಜಾಪ್ರಭುತ್ವವನ್ನು ಕಾಪಾಡಬಹುದೇ ಎಂದು ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ(H D Kumaraswamy) ಅವರು ರಾಜ್ಯ ಕಾಂಗ್ರೆಸ್ ಸರಕಾರವನ್ನು ಸೋಮವಾರ(ಸೆ16) ಪ್ರಶ್ನಿಸಿದ್ದಾರೆ.

Advertisement

ಎಕ್ಸ್ ಪೋಸ್ಟ್ ನಲ್ಲಿಎಚ್. ಡಿ.ಕುಮಾರಸ್ವಾಮಿ ಅವರು “ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?” ಎಂದು ಆಕ್ರೋಶ ಹೊರ ಹಾಕಿದ್ದಾರೆ.

”ಮಾನ್ಯ ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ. ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ” ಎಂದು ಸರಕಾರದ ಕ್ರಮದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.