Advertisement
ರಾಜ್ಯ ಸರ್ಕಾರದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ತವರು ಜಿಲ್ಲೆಯಲ್ಲಿ ಆಸ್ಪತ್ರೆಗಳ ಅವ್ಯ ವಸ್ಥೆಗಳ ವಿಚಾರವನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿಗಳು ಸರ್ಕಾರಿ ಆಸ್ಪತ್ರೆಗಳನ್ನು ಸುಧಾರಿಸಲು ಆ ದೇವರೇ ಮತ್ತೂಮ್ಮೆ ಅವತರಿಸಬೇಕೆಂದು ತಮ್ಮ ಅಸಮಾಧಾನವನ್ನು ಹೊರಹಾಕಿ, ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಒಂದು ವರದಿಯೂ ಸಹ ಸಲ್ಲಿಸುವುದಾಗಿ ಹೇಳಿದರು.
Related Articles
ಸರ್ಜರಿ ಮಾಡಲು ಮುಂದಾಗಬೇಕಿದೆ.
Advertisement
ಆರೋಗ್ಯ ಕೇಂದ್ರಗಳಲ್ಲಿ ಅತೃಪ್ತಿದಾಯಕ ಸೇವೆಚಿಕ್ಕಬಳ್ಳಾಪುರ ಜಿಲ್ಲೆಯನ್ನು ಮಾದರಿ ಮಾಡಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಜಿಲ್ಲೆಯ ಅನೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಮತ್ತೂಂದೆಡೆ ತಾಲೂಕು ಮತ್ತು ಜಿಲ್ಲಾಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರೂ ಸಹ ಜಿಲ್ಲೆಯ ಚಿಂತಾಮಣಿ ಮತ್ತು ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆಗಳ ದರ್ಶನ ಮಾಡಿ ಹೈಕೋರ್ಟ್‌ನ ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವುದು ನೋಡಿದರೆ ಅಧಿಕಾರಿಗಳ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ ಎಂಬ ಸಂಶಯ ಮೂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಅನೇಕ ಆಸ್ಪತ್ರೆಯಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಕೆಲವರು ಸಮವಸ್ತ್ರವನ್ನು ಸಹ ಧರಿಸುವುದಿಲ್ಲ ಇದರಿಂದ ಯಾರು ವೈದ್ಯರು ಎಂದು ಗೊತ್ತಾಗುವುದಿಲ್ಲ ಎಂದು ಸಾರ್ವಜನಿಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆಗಳ ಬಗ್ಗೆ ನ್ಯಾ. ಅವರು ಅಸಮಾಧಾನ ವ್ಯಕ್ತಪಡಿಸಿರುವುದನ್ನು ರಾಜ್ಯ ಆರೋಗ್ಯ ಸಚಿವರು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆಗಳನ್ನು ಸುಧಾರಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು.
●ಎನ್.ಎಚ್.ಶಿವಶಂಕರ್‌ರೆಡ್ಡಿ,
ಗೌರಿಬಿದನೂರು ಶಾಸಕ ಜಿಲ್ಲೆಯ ಎರಡು ಆಸ್ಪತ್ರೆಗಳಿಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು
ಭೇಟಿ ನೀಡಿರುವ ಕುರಿತು ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಕೇಳಿರುವ ವರದಿಯನ್ನು
ತನಿಖಾ ತಂಡವನ್ನು ರಚಿಸಿ ಸಲ್ಲಿಸಿದ್ದೇವೆ. ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ
ಅವಧಿ ಮೀರಿದ ಗುಳಿಗೆಗಳನ್ನು ವಿತರಿಸಿಲ್ಲ. ವೈದ್ಯರ ಸಂಖ್ಯೆ ಕಡಿಮೆಯಿತ್ತು ಆಸ್ಪತ್ರೆಗಳ ವ್ಯವಸ್ಥೆಗಳ ಕುರಿತು ವರದಿ ಮಂಡಿಸಿದ್ದೇವೆ.
●ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ
ಆರೋಗ್ಯಾಧಿಕಾರಿ ಚಿಕ್ಕಬಳ್ಳಾಪುರ ಎಂ.ಎ. ತಮೀಮ್ ಪಾಷ