Advertisement
”ಮಾನ್ಯ ಸಿದ್ದರಾಮಯ್ಯನವರೇ…ಕೊನೆಗೂ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು.ನಿಮ್ಮ ಎಟಿಎಂ ಸರಕಾರಕ್ಕೆ ಮರ್ಯಾದೆ, ವಚನಬದ್ಧತೆ ಇರುವುದೇ ಆದರೆ, ನೀವು ಕೊಡಬೇಕಿರುವುದು ಕೇವಲ 5 ಕೆಜಿಯ ಅಕ್ಕಿಯ ಹಣವನ್ನಲ್ಲ…10 ಕೆಜಿ ಅಕ್ಕಿಯನ್ನು ರಾಜ್ಯ ಸರಕಾರ ಪೂರೈಸಲಿದೆ ಎಂದು ಎದೆ ಬಡಿದುಕೊಂಡಂತೆ, 10 ಕೆಜಿಯ ಸಂಪೂರ್ಣ ಹಣವನ್ನು ಜನರ ಖಾತೆಗಳಿಗೆ ವರ್ಗಾಯಿಸಿ.ಕೊಟ್ಟ ಮಾತು ತಪ್ಪಿ ನಡೆದರೆ ಮೆಚ್ಚಲಾರರು ಕನ್ನಡಿಗರು..!” ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ ”ಸಿದ್ದರಾಮಯ್ಯ ಅವರ ಸರಕಾರ ವಚನ ಭ್ರಷ್ಟವಾಗಿದೆ. ಅಕ್ಕಿ ಕೊಡದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಚುನಾವಣ ಪೂರ್ವದಲ್ಲಿ 10 ಕೆಜಿ ಅಕ್ಕಿ ಅಂದಿದ್ದರು, ಒಟ್ಟು 15 ಕೆ.ಜಿ ಅಕ್ಕಿ ಕೊಡಬೇಕಿತ್ತು. ಈಗ ಅಕ್ಕಿಗೆ ಹಣ ಹಾಕಲು ಹೊರಟಿದ್ದಾರೆ. ಹಣ ಏನು ತಿನ್ನುವುದಕ್ಕೆ ಆಗುತ್ತದೋ ಎಂದು ಈ ಹಿಂದೆ ಸಿದ್ದರಾಮಯ್ಯ ಹೇಳಿದ್ದರು. ನಿಮಗೆ ಶಕ್ತಿ ಇದ್ದರೆ 10 ಕೆಜಿ ಅಕ್ಕಿ ಕೊಡಬೇಕು. ಹಣ ಹಾಕುವ ಡೋಂಗಿ ರಾಜಕಾರಣ ಸರಿಯಲ್ಲ. ಇದನ್ನು ನಾವು ಖಂಡಿಸುತ್ತೇವೆ. ನುಡಿದಂತೆ ನಡೆಯದಿದ್ದಲ್ಲಿ ಸದನದ ಒಳಗೂ ಹೊರಗೂ ಹೋರಾಟ ಮಾಡುತ್ತೇವೆ” ಎಂದು ಕಿಡಿ ಕಾರಿದ್ದಾರೆ.