Advertisement

Tribute: ಎಂದಿಗೂ ಮರೆಯಲಾರೆ…”: ಮುಂಬೈ ದಾಳಿಯ ಸಂತ್ರಸ್ತರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

01:29 PM Nov 26, 2023 | Team Udayavani |

ಮುಂಬಯಿ: ಮುಂಬೈನಲ್ಲಿ ನಡೆದ 26/11 ಭಯೋತ್ಪಾದನಾ ದಾಳಿ ನಡೆದು ಇಂದಿಗೆ 15 ವರ್ಷ ಪೂರ್ಣಗೊಂಡಿದ್ದು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ 107 ನೇ ಆವೃತ್ತಿಯ ‘ಮನ್ ಕಿ ಬಾತ್’ ನಲ್ಲಿ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದವರನ್ನು ಸ್ಮರಿಸಿದರು.

Advertisement

ಇದೊಂದು “ಅತ್ಯಂತ ಭೀಕರ ಭಯೋತ್ಪಾದನಾ ದಾಳಿ” ಎಂದು ಕರೆದ ಪ್ರಧಾನಿ, “ನವೆಂಬರ್ 26 ರ ಈ ದಿನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶವು ಅತ್ಯಂತ ಭೀಕರ ಭಯೋತ್ಪಾದಕ ದಾಳಿಗೆ ಒಳಗಾಯಿತು” ಎಂದು ಹೇಳಿದರು.

ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಶ್ರದ್ಧಾಂಜಲಿ ಸಲ್ಲಿಸಿದ ಅವರು, ಇಂದು ಇಡೀ ದೇಶವು “ಹುತಾತ್ಮರಾದ ನಮ್ಮ ವೀರ ಪುರುಷರನ್ನು ಸ್ಮರಿಸುತ್ತಿದೆ” ಎಂದು ಹೇಳಿದರು.
ನವೆಂಬರ್ 26 ಅನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಘೋರ ಭಯೋತ್ಪಾದಕ ದಾಳಿ ನಡೆಯಿತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದಾರೆ. ಆದರೆ, ನಾವು ಆ ದಾಳಿಯಿಂದ ಚೇತರಿಸಿಕೊಂಡಿರುವುದು ಭಾರತದ ಸಾಮರ್ಥ್ಯ ಮತ್ತು ಈಗ ನಾವು ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿದ್ದೇವೆ ”ಎಂದು ಪ್ರಧಾನಿ ಮೋದಿ ಹೇಳಿದರು.

ನವೆಂಬರ್ 26, 2008 ರಂದು, 10 ಪಾಕಿಸ್ತಾನಿ ಭಯೋತ್ಪಾದಕರು ಸಮುದ್ರ ಮಾರ್ಗವಾಗಿ ಮುಂಬೈಗೆ ಆಗಮಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದರು ಈ ವೇಳೆ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಜೀವ ಕಳೆದುಕೊಂಡರು ಮತ್ತು ಅನೇಕ ಮಂದಿ ಭಯೋತ್ಪಾದಕ ದಾಳಿಯಿಂದ ಗಾಯಗೊಂಡರು. ಭಯೋತ್ಪಾದಕರ ದಾಳಿಯಲ್ಲಿ ಅಂದಿನ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮುಖ್ಯಸ್ಥ ಹೇಮಂತ್ ಕರ್ಕರೆ, ಸೇನಾ ಮೇಜರ್ ಸಂದೀಪ್ ಉನ್ನಿಕೃಷ್ಣನ್, ಮುಂಬೈನ ಹೆಚ್ಚುವರಿ ಪೊಲೀಸ್ ಕಮಿಷನರ್ ಅಶೋಕ್ ಕಾಮ್ಟೆ ಮತ್ತು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ವಿಜಯ್ ಸಲಸ್ಕರ್ ದಾಳಿಯಲ್ಲಿ ಹುತಾತ್ಮರಾದರು.

ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು.

Advertisement

ಇದನ್ನೂ ಓದಿ: UP: ನಿದ್ರೆ ಬರುವ ಪಾಯಸ ಕೊಟ್ಟು ಫಸ್ಟ್ ನೈಟ್ ದಿನವೇ ಚಿನ್ನಾಭರಣದೊಂದಿಗೆ ಪರಾರಿಯಾದ ನವವಧುಗಳು

Advertisement

Udayavani is now on Telegram. Click here to join our channel and stay updated with the latest news.

Next