Advertisement

ರಾಜಕೀಯ ಪ್ರವೇಶಿಸಲಾರೆ:ಮಾತೆ ಮಹಾದೇವಿ

06:35 AM Apr 17, 2018 | Team Udayavani |

ಬೆಂಗಳೂರು: ಧರ್ಮಪ್ರಚಾರ ನನ್ನ ಕಾಯಕವಾಗಿದ್ದು, ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶಿಸಲಾರೆ ಎಂದು ಮಾತೆ ಮಹಾದೇವಿ ಸ್ಪಷ್ಟಪಡಿಸಿದ್ದಾರೆ. ಆದರೆ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಗೆ ರಾಜಕೀಯದ ಬಗ್ಗೆ ನನಗೆ ಆಸಕ್ತಿ ಇಲ್ಲ. ಯಾವುದೇ ಪಕ್ಷವನ್ನೂ ಸೇರುವುದಿಲ್ಲ. ಮಾತೆ ಮಹಾದೇವಿ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಸುದ್ದಿಯಲ್ಲಿ ಹುರುಳಿಲ್ಲ ಎಂದರು.

ಜಾಗತಿಕ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಮಠಾಧೀಶರ ಸಭೆಯಲ್ಲಿ ಕಾಂಗ್ರೆಸ್‌ ಬೆಂಬಲಿಸುತ್ತೇನೆ ಎಂದು ಹೇಳಿದ್ದೆ. ಜತೆಗೆ ಆ ಸಮಾವೇಶದಲ್ಲಿ ಭಾಗವಹಿಸಿದ್ದ ಮಠಾಧೀಶರಲ್ಲಿ ನೀವು, ನಿಮ್ಮ ಅನುಯಾಯಿಗಳಿಗೂ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಸೂಚಿಸಿ ಎಂದು ಕರೆ ನೀಡಿದ್ದೆ. ಈ ಹೇಳಿಕೆಗೆ ಈಗಲೂ ನಾನು ಬದ್ಧ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next