Advertisement

ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಹಿಸೆವು

10:19 AM Sep 18, 2019 | sudhir |

ಬೆಂಗಳೂರು: ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನೂ ಸರಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ “ಏಕ ದೇಶ, ಏಕ ಭಾಷೆ’ ಹೇಳಿಕೆ ಅನಂತರ ಹುಟ್ಟಿಕೊಂಡಿರುವ ವಿವಾದಗಳ ಸಂಬಂಧ ಸೋಮವಾರ ಟ್ವೀಟ್‌ ಮಾಡಿರುವ ಯಡಿಯೂರಪ್ಪ, ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು.

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರಕಾರ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next