ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಲಿದ್ದಾರೆಯೇ ಎಂಬ ಬಗ್ಗೆ ಕೇಂದ್ರ ಗೃಹ ಸಚಿವ, ಬಿಜೆಪಿ ಹಿರಿಯ ಮುಖಂಡ ಅಮಿತ್ ಶಾ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮುಂಬರುವ ಮೂರು ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಈ ಬಗ್ಗೆ ತಿಳಿದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:“ಯಾವ ದೇವರಿಗೆ ಹೂ’ ಎಂದು ಪ್ರಶ್ನಿಸಿ ಮಹಿಳೆಯ ಮಾಂಗಲ್ಯ ಸರ ಕದ್ದರು
ಎಎನ್ ಐ ನ್ಯೂಸ್ ಏಜೆನ್ಸಿಯ ಸಂದರ್ಶನದಲ್ಲಿ ಮಾತನಾಡಿರುವ ಅಮಿತ್ ಶಾ, ತಮಿಳುನಾಡಿನ ಕನ್ಯಾಕುಮಾರಿಯಿಂದ ಜಮ್ಮು-ಕಾಶ್ಮೀರದ ಶ್ರೀನಗರದವರೆಗೆ 145 ದಿನಗಳ ಕಾಲ ರಾಹುಲ್ ಗಾಂಧಿ ನಡೆಸಿದ್ದ ಪಾದಯಾತ್ರೆಯ ಪರಿಣಾಮವನ್ನು ಈ ತಿಂಗಳು ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ನಡೆಯಲಿರುವ ಚುನಾವಣೆಯ ನಂತರ ನಿರ್ಧರಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಐದು ತಿಂಗಳ ಕಾಲದ 4,000 ಕಿಲೋ ಮೀಟರ್ ಗಿಂತಲೂ ಅಧಿಕ ಭಾರತ್ ಜೋಡೋ ಯಾತ್ರೆ ಕಳೆದ ತಿಂಗಳು ಕೊನೆಗೊಂಡಿತ್ತು. ಭಾರತ್ ಜೋಡೋ 12 ರಾಜ್ಯ ಹಾಗೂ ಎರಡು ಕೇಂದ್ರಾಡಳಿತ ಪ್ರದೇಶವನ್ನ ಹಾದು ಹೋಗಿತ್ತು.
ಭಾರತೀಯ ಜನತಾ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅಮಿತ್ ಶಾ, 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕೇಸರಿ ಪಾಳಯಕ್ಕೆ ಯಾವುದೇ ಎದುರಾಳಿ(ಪ್ರತಿಪಕ್ಷ)ಗಳೇ ಇಲ್ಲ. ಇಡೀ ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ಹೃತ್ಪೂರ್ವಕ ವಿಶ್ವಾಸ ಇಟ್ಟಿದ್ದಾರೆ ಎಂದು ತಿಳಿಸಿದ್ದಾರೆ.