ವಾರಾಣಸಿ: ಕಾಶಿ ವಿಶ್ವನಾಥ ದೇಗುಲಕ್ಕೆ ಅಂಟಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ಸರ್ವೇ ಕಾರ್ಯದ ಬಗ್ಗೆ ವಾರಾಣಸಿಯ ಸ್ಥಳೀಯ ನ್ಯಾಯಾಲಯ ಗುರುವಾರ (ಮೇ 12) ಮಹತ್ವದ ಆದೇಶ ನೀಡುವ ಸಾಧ್ಯತೆಯಿದೆ.
Advertisement
ನ್ಯಾಯಾಲಯದ ಆದೇಶದ ಮೇರೆಗೆ ಇತ್ತೀಚೆಗೆ ಮಸೀದಿಯಲ್ಲಿ ನ್ಯಾಯಾಲಯದಿಂದ ನೇಮಿಸಲ್ಪಟ್ಟಿದ್ದ ಕೋರ್ಟ್ ಕಮೀಷನ್ ವತಿಯಿಂದ ಸರ್ವೇ ಕಾರ್ಯ ಆರಂಭವಾಗಿತ್ತು. ಆದರೆ, ಸರ್ವೇ ವೇಳೆ ಮಸೀದಿಯೊಳಗೆ ವಿಡಿಯೋಗ್ರಫಿ ಮಾಡಲು ಮಸೀದಿಯ ಆಡಳಿತ ಮಂಡಳಿ ನಿರಾಕರಿಸಿತ್ತು.
ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಮಸೀದಿಯಲ್ಲಿ ವಿಡಿಯೋಗ್ರಫಿ ಮಾಡಬೇಕೇ ಬೇಡವೇ ಎಂಬ ಬಗ್ಗೆ ಗುರುವಾರ ತೀರ್ಪು ಪ್ರಕಟವಾಗುವ ಸಾಧ್ಯತೆಯಿದೆ.