Advertisement
ವಿಧಾನಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಬಿ.ಎಂ. ಫಾರೂಕ್ ಅವರ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
Related Articles
ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಹಂತ-ಹಂತವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಯೋಜನಾ ವರದಿಯನ್ನು ಸೂಕ್ತ ರೀತಿಯಲ್ಲಿ ಪರಿಷ್ಕರಿಸಲಾಗುತ್ತಿದೆ ಎಂದು ಬಿ.ಎಂ ಫಾರೂಕ್ ಅವರ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಲಿಖಿತ ಉತ್ತರ ನೀಡಿದ್ದಾರೆ.
Advertisement
ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕೇಂದ್ರ ಬಸ್ ನಿಲ್ದಾಣ ಯೋಜನೆಯನ್ನು ಪಿಪಿಪಿ ಮಾದರಿಯಡಿ 445 ಕೋಟಿ ಮೊತ್ತಕ್ಕೆ 2020ರ ಮೇ 20ರಂದು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕಾಮಗಾರಿಗೆ ಮೂರು ಬಾರಿ ಟೆಂಡರ್ ಕರೆಯಲಾಗಿತ್ತು. ಆದರೆ ಯಾವುದೇ ಬಿಡ್‌ದಾರರು ಭಾಗವಹಿಸಿಲ್ಲ. ಆದ್ದರಿಂದ ಉದ್ದೇಶಿತ ಕೇಂದ್ರ ಬಸ್ ನಿಲ್ದಾಣವನ್ನು ಹಂತ-ಹಂತವಾಗಿ ಅಭಿವೃದ್ಧಿಪಡಿಸಲು ಯೋಜನಾ ವರದಿಯನ್ನು ಪರಿಷ್ಕೃರಿಸಲಾಗುತ್ತಿದ್ದು, ಸಕ್ಷಮ ಪ್ರಾಧಿಕಾರಿಗಳಿಂದ ಪರಿಷ್ಕೃತ ವರದಿಗೆ ಅನುಮೋದನೆಯ ನಂತರ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಶೀಘ್ರವಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಸುರತ್ಕಲ್ ಮಾರುಕಟ್ಟೆ: ಟೆಂಡರ್ ಕರೆಯಲು ಕ್ರಮಸುರತ್ಕಲ್ ಮಾರುಕಟ್ಟೆ ಸಂಕೀರ್ಣ ನಿರ್ಮಾಣದ ಬಾಕಿ ಕಾಮಗಾರಿಗಳಿಗೆ ಸಚಿವ ಸಂಪುಟದ ತೀರ್ಮಾನದಂತೆ ಚಾಲ್ತಿ ದರಪಟ್ಟಿಯನ್ವಯ ಹೊಸದಾಗಿ ಟೆಂಡರ್ ಕರೆದು ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಜೆಡಿಎಸ್ ಸದಸ್ಯ ಬಿ.ಎಂ. ಫಾರೂಕ್ ಅವರ ಪ್ರಶ್ನೆಗೆ ಲಿಖೀತ ಉತ್ತರ ನೀಡಿದ್ದಾರೆ. ವಿವಿಧ ಕಾರಣಗಳಿಂದ ಕಾಮಗಾರಿ ವಿಳಂಬವಾಗಿದೆ. 82 ಕೋಟಿ ರೂ. ಮೊತ್ತದ ಪರಿಷ್ಕೃತ ಅಂದಾಜಿಗೆ ಮಂಗಳೂರು ಮಹಾನಗರ ಪಾಲಿಕೆ 2022ರ ಡಿ.31ಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈವರೆಗೆ ನಿರ್ವಹಿಸಿದ 16.75 ಕೋಟಿ ವೆಚ್ಚ ಕಳೆದ ಉಳಿದ 65.24 ಕೋಟಿ ಮೊತ್ತದ ಬಾಕಿ ಕಾಮಗಾರಿಯನ್ನು ಚಾಲ್ತಿ ದರಪಟ್ಟಿಯಂತೆ ಹೊಸದಾಗಿ ಟೆಂಡರ್ ಕರೆದು ಅನುಷ್ಠಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದೆ. ಬಾಕಿ ಕಾಮಗಾರಿಯು 50 ಕೋಟಿ ಮೇಲ್ಪಟ್ಟು ಇರುವುದರಿಂದ ರಾಜ್ಯ ಟೆಂಡರ್ ಪರಿಶೀಲನಾ ಸಮಿತಿ ಮುಂದೆ ಮಂಡಿಸಲಾಗಿದೆ. ಟೆಂಡರ್ ಕರೆಯುವ ಮೊದಲು ಅನುಪಾಲನಾ ವರದಿ ಸಲ್ಲಿಸಲು ಟೆಂಡರ್ ಸಮಿತಿ ಸೂಚಿಸಿದೆ. ಸಮಿತಿಗೆ ವರದಿ ಸಲ್ಲಿಸಿ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಲಾಗುತ್ತದೆ. ಮಾರುಕಟ್ಟೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕ ಸದ್ಯ ಸಾರ್ವಜನಿಕ ಮೈದಾನದಲ್ಲಿ ನಡೆಯುತ್ತಿರುವ ಮಾರುಕಟ್ಟೆಯನ್ನು ಸ್ಥಳಾಂತರಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.