ನವ ದೆಹಲಿ : ಜೂನ್ ತನಕ ದ್ವಿತೀಯ ಪದವಿ ಪೂರ್ವ ವಿದ್ಯಾರ್ಥಿಗಳನ್ನು ಒತ್ತಡದಲ್ಲಿರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಸಿ ಬಿ ಎಸ್ ಇ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿದಂತೆ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಕೂಡ ರದ್ದುಗೊಳಿಸಬೇಕು. ಈಗ ಪಿಯುಸಿ ವಿದ್ಯಾರ್ಥಿಗಳ ಪರೀಕ್ಚೆಯನ್ನು ಜೂನ್ ಗೆ ಮುಂದೂಡಲಾಗಿದೆ. ಅಲ್ಲಿ ತನಕ ಪಿಯುಸಿ ವಿದ್ಯಾರ್ಥಿಗಳನ್ನು ಒತ್ತಡದಲ್ಲಿರಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ಓದಿ : ಏಕದಿನ ರಾಂಕಿಂಗ್: ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್ ಗೆ ಅಗ್ರಸ್ಥಾನ
ಕೇಂದ್ರ ಸರ್ಕಾರ, ಸಿ ಬಿ ಎಸ್ ಇ ಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಜೂನ್ ಗೆ ಮುಂದೂಡಿ ಹೊರಡಿಸಿರುವ ಆದೇಶದ ಬೆನ್ನಿಗೆ ಪ್ರಿಯಾಂಕ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಮತ್ತು ಜೂನ್ 1 ರ ನಂತರ ಪರಿಸ್ಥಿತಿಯ ಪರಿಶೀಲನೆ ನಡೆಸಲಾಗುವುದು. ಪರೀಕ್ಷೆಗಳನ್ನು ನಡೆಸುವ ಕನಿಷ್ಠ 15 ದಿನಗಳ ಮೊದಲು ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗುವುದು” ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ, ಕೇಂದ್ರ ಸರ್ಕಾರ ಸಿ ಬಿ ಎಸ್ ಇ, ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ರದ್ದುಗೊಳಿಸಿರುವುದು ಸ್ವಾಗತಾರ್ಹ, ಆದರೇ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಗ್ಗೆಯೂ ಕೂಡ ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ಜೂನ್ ತನಕ ವಿದ್ಯಾರ್ಥಿಗಳನ್ನು ಒತ್ತಡದಲ್ಲಿರಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಇನ್ನು, ಸಿ ಬಿ ಎಸ್ ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಪ್ರಿಯಾಂಕಾ ಗಾಂಧಿ ಭಾನುವಾರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ವಿದ್ಯಾರ್ಥಿಗಳು ತುಂಬಿರುವ ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷತೆಯನ್ನು ಖಚಿತಪಡಿಸುವುದು ಅಸಾಧ್ಯ ಎಂದು ಹೇಳಿದ್ದರು.
ಓದಿ : ಪಶ್ಚಿಮ ಬಂಗಾಳದಲ್ಲಿ 70 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲುವುದಿಲ್ಲ : ಮಮತಾ ಬ್ಯಾನರ್ಜಿ