Advertisement
ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯಿಂದ ಸೋಮವಾರ ನಗರದ ಶಿಕ್ಷಕರ ಸದನದಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯಮಟ್ಟದ ಸಮುದಾಯ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದರು.
Related Articles
Advertisement
ಸರ್ಕಾರಿ ಶಾಲೆ ಮುಚ್ಚುವುದಿಲ್ಲ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮಾತನಾಡಿ, ರಾಜ್ಯದ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ. ಬದಲಾಗಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಎರಡು ಸಾವಿರ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ನಡೆಯುತ್ತಿದೆ ಎಂದರು.
ಚಿಕ್ಕ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೂರ್ವಶಾಲಾ (ಫ್ರಿ-ಸ್ಕೂಲ್ ) ಹಾಗೂ ಪ್ಲೇಹೋಂಗಳನ್ನು ಶಿಕ್ಷಣದ ಕಾನೂನಿನ ವ್ಯಾಪ್ತಿಗೆ ಒಳಪಡಿಸಲು ಚಿಂತನೆ ನಡೆಸುತ್ತಿದ್ದೇವೆ. ಸರ್ಕಾರವೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಯೋಜನೆಯಲ್ಲಿದೆ. ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಪ್ರಾರಂಭಿಸಬೇಕೇ ಎಂಬ ಗೊಂದಲ ಉಂಟಾಗಿದೆ. ಹೀಗಾಗಿ ಮತ್ತೂಮ್ಮೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುಪ್ರೀಂಕೋರ್ಟ್ ನಿವೃತ್ತ ನ್ಯಾ.ಎಸ್.ರಾಜೇಂದ್ರ ಬಾಬು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ್, ಶಿಕ್ಷಣ ತಜ್ಞ ಡಾ.ವಿ.ಪಿ.ನಿರಂಜನಾರಾಧ್ಯ ಇತರರು ಇದ್ದರು.
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಈಗಾಗಲೇ ಎಸ್‌ಡಿಎಂಸಿ ಮೂಲಕ ಒಂದು ಜೊತೆ ಸಮವಸ್ತ್ರ ಒದಗಿಸುತ್ತಿದೆ. ಎರಡನೇ ಜೊತೆ ಸಮವಸ್ತ್ರಕ್ಕಾಗಿ 200 ರೂ.ನೀಡುತ್ತಿದೆ. ಮುಂದಿನ ವರ್ಷದಿಂದ ಎರಡನೇ ಜೊತೆ ಸಮವಸ್ತ್ರಕ್ಕೆ 300 ರೂ. ನೀಡಲಿದ್ದೇವೆ.-ತನ್ವೀರ್ ಸೇಠ್, ಶಿಕ್ಷಣ ಸಚಿವ