Advertisement
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಾಂತ್ವನ ಯೋಜನೆ, ಸ್ತ್ರೀಶಕ್ತಿ ಯೋಜನೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಣೆ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ತ್ತೈಮಾಸಿಕ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.
Related Articles
Advertisement
ಕುಣಿಗಲ್, ಮಧುಗಿರಿ ಹಾಗೂ ತುರುವೇಕೆರೆ ಸಾಂತ್ವನ ಕೇಂದ್ರಗಳಲ್ಲಿ ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ಕೇಳಿ ಬಂದಿವೆ. ಇದರಂತೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ಕಳೆದ ಸಭೆಯಲ್ಲಿ ಸೂಚಿಸಲಾಗಿತ್ತು.
ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಕೇಳಿದಾಗ ಮಾಹಿತಿ ಒದಗಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶನ ಎಸ್. ನಟರಾಜ್, ಕೇಂದ್ರಗಳಿಗೆ ಪೊಲೀಸ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ್ದಾರೆ.
ವರದಿಯನುಸಾರ ಕುಣಿಗಲ್, ಮಧುಗಿರಿ ಹಾಗೂ ತುರುವೇಕೆರೆ ಸಾಂತ್ವನ ಕೇಂದ್ರಗಳಲ್ಲಿ ಅಧಿಕಾರಿಗಳ ಭೇಟಿ ಸಂದರ್ಭದಲ್ಲಿ ಕೇಂದ್ರದಲ್ಲಿ ದಾಖಲಾಗುವ ಪ್ರಕರಣಗಳಿಗೆ ಸಂಬಂಧಿಸಿದ ಪ್ರತ್ಯೇಕ ದಾಖಲೆ, ಕಡತ, ವಹಿವಾಟುಗಳನ್ನು ನಿರ್ವಹಿಸಿರುವುದಿಲ್ಲ.
ಸಿಬ್ಬಂದಿಯೂ ನಿಗದಿತ ವೇಳೆಯಲ್ಲಿ ಸಮರ್ಪಕ ವಾಗಿ ಕಾರ್ಯನಿರ್ವಹಿಸುತ್ತಿ ಲ್ಲದಿರುವುದು ಕಂಡು ಬಂದಿದೆ ಎಂದು ತಿಳಿಸಿದರು.
ಮಹಿಳೆಯರಿಗೆ ಅರಿವು ಮೂಡಿಸಿ: ನಂತರ ಮಾತನಾಡಿದ ಸಿಇಒ ಶುಭಾ ಕಲ್ಯಾಣ್ ಸಾಂತ್ವನ ಕೇಂದ್ರದ ಕಾರ್ಯಚಟುವಟಿಕೆ ಬಗ್ಗೆ ಎಲ್ಲ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಾಸಿಕ ತಾಯಂದಿರ ಸಭೆ, ಅಂಗನವಾಡಿ ಕಾರ್ಯಕರ್ತೆಯರ ಸಭೆ, ಗ್ರಾಮ ಸಭೆಗಳನ್ನು ನಡೆಸಿ ಮಹಿಳೆಯರಿಗೆ ಅರಿವು ಮೂಡಿಸಬೇಕೆಂದರು.
ಮಹಿಳಾ ಸಹಾಯ ವಾಣಿ ಸಂಖ್ಯೆ 1091 ಮೂಲಕ ಸ್ವೀಕರಿಸಿದ ಕರೆಗಳ ತಾಲೂಕುವಾರು ಮಾಹಿತಿ ಪಡೆದರು. ಮಹಿಳೆಯರು ಎಚ್ಚೆತ್ತುಕೊಳ್ಳುವಂತೆ ಮಹಿಳೆಯರ ಮತ್ತು ಮಕ್ಕಳ ಅನೈತಿಕವಾಗಿ ಸಾಗಾಣಿಕೆ ತಡೆ ಕಾಯ್ದೆ ಕುರಿತು ಜಿಲ್ಲೆ ಯಲ್ಲಿರುವ ಎಲ್ಲ ಲಂಬಾಣಿ ತಾಂಡ, ಗಾರ್ಮೆಂಟ್ಸ್ ಹಾಗೂ ಮಹಿಳೆಯರು ಕಾರ್ಯನಿರ್ವಹಿಸುವ ಮತ್ತಿತರ ಸ್ಥಳಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸ ಬೇಕೆಂದು ನಿರ್ದೇಶನ ನೀಡಿದರು.
ನಂತರ ಮಾತನಾಡಿದ ನಟರಾಜ್ ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ, ಬಹುಪತ್ನಿತ್ವ, ಅತಾ ಚಾರ, ಬಾಲ್ಯವಿವಾಹ, ಲೈಂಗಿಕ ಶೋಷಣೆ, ವಿಚ್ಛೇದನೆ, ಮತ್ತಿತರ ಮಹಿಳಾ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹಿಳಾ ಸಹಾಯ ವಾಣಿ 1091 ಮೂಲಕ ಸ್ವೀಕರಿಸುವ ಕರೆಗಳು ನೇರವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯುಕ್ತರ ಕಚೇರಿ ಗಮನಕ್ಕೆ ಹೋಗುತ್ತಿ ರುವುದರಿಂದ ಜಿಲ್ಲೆ ಯಿಂದ ಸ್ವೀಕರಿಸಿದ ಕರೆಗಳ ಮಾಹಿತಿ ನಮಗೆ ದೊರೆ ಯುತ್ತಿಲ್ಲ.
ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರಕರಣಗಳಿಗೆ ಮಾತ್ರ ಸೀಮಿತಗೊಳಿಸಿ ಹೊಸ ಮಹಿಳಾ ಸಹಾಯ ವಾಣಿ ಸಂಖ್ಯೆ 181ನ್ನು ಸ್ಥಾಪಿಸಲಾಗಿದ್ದು, ಶೋಷಣೆ ಗೊಳಗಾದ ಮಹಿಳೆಯರು ಈ ಸಂಖ್ಯೆಗೆ ಕರೆ ಮಾಡುವ ಮೂಲಕ ದೂರನ್ನು ದಾಖಲಿಸಬಹು ದಾಗಿದೆ ಎಂದು ತಿಳಿಸಿದರು. ವಿವಿಧ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಾಂತ್ವನ ಕೇಂದ್ರದ ಸಿಬ್ಬಂದಿ ಗಳು, ಮತ್ತಿತರರು ಹಾಜರಿದ್ದರು.