Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿ

08:32 AM May 26, 2020 | Suhan S |

ಧಾರವಾಡ : ಕೋವಿಡ್ ಆತಂಕದ ನಡುವೆ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವುದು ಅಸಾಧ್ಯ. ಹೀಗಾಗಿ ಈ ಬಾರಿಯ ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲ ಮಕ್ಕಳನ್ನು ತೇರ್ಗಡೆ ಮಾಡಲು ಸರ್ಕಾರ ನಿರ್ಧರಿಸಬೇಕು ಎಂದು ಅಖೀಲ ಭಾರತ ಶಿಕ್ಷಕರ ಫೆಡರೇಷನ್‌ ಉಪಾಧ್ಯಕ್ಷ ಬಸವರಾಜ ಗುರಿಕಾರ ಆಗ್ರಹಿಸಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ಘಟ್ಟ. ಪರೀಕ್ಷೆ ಅಂಕಪಟ್ಟಿಯೂ ಮಹತ್ವದ ದಾಖಲೆಯಾಗಿದೆ. ಈ ಮಧ್ಯೆ ಜೂನ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಾಗಿ ಸರ್ಕಾರ ಪ್ರಕಟಿಸಿದೆ. ವಿದ್ಯಾರ್ಥಿಗಳ ಜೀವನದ ಮುಂದೆ ಪರೀಕ್ಷೆ ಅನಿವಾರ್ಯವೇ? ಎಂಬ ಪ್ರಶ್ನೆ ಮೂಡುತ್ತದೆ. ಈಗಾಗಲೇ ಪಂಜಾಬ್‌, ಹರಿಯಾಣ ಸೇರಿ ಕೆಲ ರಾಜ್ಯಗಳಲ್ಲಿ ಪರೀಕ್ಷೆ ರದ್ದುಗೊಳಿವೆ. ಅದೇ ರೀತಿ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರು ಸೂಕ್ತ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಬೇಕು ಎಂದರು.

ದೈಹಿಕ ಅಂತರ ಕಾಪಾಡಿಕೊಳ್ಳುವುದು, ಪರೀಕ್ಷಾ ಹಂತದಲ್ಲಿನ ಇತರೆ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸುವ ಸಮಸ್ಯೆ ಸರ್ಕಾರದ ಎದುರಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಬೇಕು. ಈಗಾಗಲೇ ಶಾಲೆಗಳಲ್ಲಿ ವಾರ್ಷಿಕ ಪರೀಕ್ಷೆ ಮಾದರಿಯಲ್ಲೇ ಪೂರ್ವಭಾವಿ ಪರೀಕ್ಷೆ ನಡೆಸಲಾಗಿದೆ. ಅದರ ಫ‌ಲಿತಾಂಶ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಬೇಕೆಂದು ಆಗ್ರಹಿಸಿದರು. ಈ ವಿಷಯದಲ್ಲಿ ಅನೇಕ ಸಂಘಟನೆಗಳು, ಶೈಕ್ಷಣಿಕ ವಲಯದಲ್ಲಿನ ಪರಿಣಿತರು ಪರೀಕ್ಷೆ ರದ್ದುಪಡಿಸಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಉಂಟಾದ ಗೊಂದಲಕ್ಕೆ ತೆರೆ ಎಳೆಯಬೇಕೆಂದು ಗುರಿಕಾರ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next