Advertisement

ಅನಧಿಕೃತ ನಿವೇಶನ ರದ್ದುಪಡಿಸಿ

11:01 AM Aug 23, 2020 | Suhan S |

ಚಿಕ್ಕಮಗಳೂರು: ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಡಾವಣೆಗಳಲ್ಲಿ ಅನಧಿಕೃತವಾಗಿ ಹಂಚಿಕೆಯಾಗಿರುವ ನಿವೇಶನಗಳನ್ನು ರದ್ದುಪಡಿಸಿ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರು ಅಧಿ ಕಾರಿಗಳಿಗೆ ಸೂಚಿಸಿದರು.

Advertisement

ಶುಕ್ರವಾರ ನಗರದ ನಗರಸಭೆಯ ಕಚೇರಿ ಸಭಾಂಗಣದಲ್ಲಿ ರಾಜೀವ್‌ ಗಾಂಧಿ ಬಡಾವಣೆ, ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆ, ಇಂದಿರಾ ಗಾಂಧಿಬಡಾವಣೆಗಳಲ್ಲಿ ಆಶ್ರಯ ವಸತಿ ಯೋಜನೆ ಅಡಿಯಲ್ಲಿ ಹಂಚಿಕೆಯಾಗಿರುವ ನಿವೇಶನ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕೊಳಗೇರಿ ಪ್ರದೇಶದಲ್ಲಿ ಸುಮಾರು 16 ಲಕ್ಷ ಜನ ವಾಸವಾಗಿರುವ 1,873 ಕುಟುಂಬಗಳಿಗೆ 6,745 ಎಕರೆ ಪ್ರದೇಶದಲ್ಲಿ ನಿವೇಶನ ಹಕ್ಕುಪತ್ರ ವಿತರಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಅದರಂತೆ ಜಿಲ್ಲೆಯ 26 ಕೊಳಚೆ ಪ್ರದೇಶಗಳಲ್ಲಿ ವಾಸವಿರುವ 3511 ಕುಟುಂಬಗಳಲ್ಲಿ 79 ಎಕರೆ 29 ಗುಂಟೆ ಜಾಗದಲ್ಲಿ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿನ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ತೀರ್ಮಾನಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 1509 ಜಿ ಪ್ಲಸ್‌ ಮಾದರಿಯ ಮನೆ ನಿರ್ಮಾಣಕ್ಕೆ ಟೆಂಡರ್‌ ಆಗಿದ್ದು ಮತ್ತೂಂದೆಡೆ ಕೊಳಚೆ ನಿರ್ಮೂಲನ ಮಂಡಳಿಯಿಂದ 500 ಮನೆಗಳ ನಿರ್ಮಾಣಕ್ಕೆ ಟೆಂಡರ್‌ ಆಗಿದೆ. ಗುತ್ತಿಗೆದಾರರು ವಿಳಂಬ ನೀತಿ ಅನುಸರಿಸುತ್ತಿದ್ದು, ಈ ಬಗ್ಗೆ ಸಂಬಂಧಿಸಿದ ಸಚಿವರು ಹಾಗೂ ಆಯುಕ್ತರ ಗಮನಕ್ಕೆ ತಂದು ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ನಗರಸಭೆ ಪೌರಾಯುಕ್ತ ಬಸವರಾಜ್‌, ನಗರ ಆಶ್ರಯ ಸಮಿತಿ ಅಧ್ಯಕ್ಷ ನಾರಾಯಣ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next