Advertisement

ಮುಸ್ಲಿಮರಿಗೆ 2ಬಿ ಮೀಸಲು ರದ್ದು: Supreme Court ನೋಟಿಸ್‌

01:10 AM Apr 11, 2023 | Team Udayavani |

ಬೆಂಗಳೂರು: ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಶೇ. 4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಗಳ ಸಂಬಂಧ ಸುಪ್ರೀಂ ಕೋರ್ಟ್‌ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

Advertisement

ಮೀಸ ಲಾತಿ ರದ್ದು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ್‌ ಸಂಸ್ಥೆ, ಬೆಂಗಳೂರಿನ ಸೆಂಟ್ರಲ್‌ ಮುಸ್ಲಿಂ ಅಸೋಸಿಯೇಶನ್‌ ಹಾಗೂ ವಿಜಯನಗರ ನಿವಾಸಿ ಗುಲಾಮ್‌ ರಸೂಲ್‌ ಅವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾ| ಕೆ.ಎಂ. ಜೋಸೆಫ್ ಹಾಗೂ ನ್ಯಾ| ಬಿ.ವಿ. ನಾಗರತ್ನಾ ಅವರಿದ್ದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಅರ್ಜಿಗಳ ಸಂಬಂಧ ರಾಜ್ಯ ಸರಕಾರ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ ವಿಚಾರಣೆ ಯನ್ನು ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next