Advertisement
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷ ತೆಗೆದುಕೊಳ್ಳವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ. ಸಂಪುಟ ವಿಸ್ತರಣೆ ವಿಚಾರದಲ್ಲಿ ವಿಳಂಬವಾಗಿಲ್ಲ ಎಂದು ಹೇಳಿದರು.
Related Articles
ಈ ಮಧ್ಯೆ, ಸುದ್ದಿಗಾರರ ಜತೆ ಮಾತನಾಡಿದ ಶಾಸಕ ಮಹೇಶ್ ಕುಮಟಳ್ಳಿ, ಸಚಿವನಾಗಲು ನನಗೆ ಗಡಿಬಿಡಿ ಇಲ್ಲ.ನನ್ನನ್ನು ಸಚಿವನಾಗಿ ಮಾಡಿದರೆ ಸಂತೋಷ,ಯಾವ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ.ಸಚಿವ ಸ್ಥಾನ ಸಿಗದಿದ್ದರೆ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
Advertisement
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನಾವು ಯಾರು ಮುಖ್ಯಮಂತ್ರಿಯವರ ಮೇಲೆ ಮುನಿಸಿಕೊಂಡಿಲ್ಲ. ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದರು.
ರಮೇಶ್ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬುದು ನಮ್ಮ ಆಗ್ರಹ. ಲಕ್ಷ್ಮಣ ಸವದಿ ಜತೆ ರಮೇಶ್ ಜಾರಕಿಹೊಳಿ ಅವರಿಗೂ ಕೊಟ್ಟರೆ ಅದೊಂದು ಐತಿಹಾಸಿಕ ನಿರ್ಧಾರವಾಗುತ್ತದೆ ಎಂದು ಹೇಳಿದರು.
ಹಿರಿಯರಾದ ಎಚ್.ವಿಶ್ವನಾಥ್ ಅವರಿಗೂ ಪಕ್ಷದ ನಾಯಕರು ಸೂಕ್ತ ಸ್ಥಾನಮಾನ ನೀಡುವ ಭರವಸೆ ಇದೆ. ಉಪ ಚುನಾವಣೆಯಲ್ಲಿ ಅವರಿಗೆ ಜನಾದೇಶ ಸಿಗಲಿಲ್ಲ, ಹಾಗೆಂದು ಅವರನ್ನು ಕೈ ಬಿಡುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು.