Advertisement
ನೀಟ್ ಪರೀಕ್ಷೆ ರದ್ದು ಕೋರಿ ಸಲ್ಲಿಕೆಯಾಗಿರುವ 30ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಸೋಮವಾರ ಕೈಗೆತ್ತಿಕೊಂಡಿದೆ. ಪ್ರಶ್ನೆಪತ್ರಿಕೆ ಯು ಟೆಲಿಗ್ರಾಮ್, ವಾಟ್ಸ್‌ಆ್ಯಪ್‌ನಂಥ ಸಾಮಾಜಿಕ ಜಾಲತಾಣಗಳ ಮೂಲಕ ಆಗಿದ್ದರೆ, ಅದು ವ್ಯಾಪಕವಾಗಿರುತ್ತದೆ. ಈ ಕುರಿತು ಎಚ್ಚರಿಕೆಯ ಹೆಜ್ಜೆಯನ್ನಿಡಬೇಕಾದೆ ಎಂದು ಪೀಠ ಹೇಳಿತು.
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ)ದಿಂದಲೂ ಪೀಠವು ವರದಿಯನ್ನು ಕೇಳಿದೆ. ತನಿಖೆಯು ಯಾವ ಹಂತದಲ್ಲಿದೆ ಹಾಗೂ ತನಿಖೆ ವೇಳೆ ಗೊತ್ತಾಗಿರುವ ಮಾಹಿತಿಯನ್ನು ಹಂಚಿ ಕೊಳ್ಳುವಂತೆ ಕೋರ್ಟ್ ವಿಚಾರಣೆ ವೇಳೆ ಸೂಚಿ ಸಿ ತು.
Related Articles
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಗುರುತಿಸಲು ಕಳಂಕಿತ ವಿದ್ಯಾರ್ಥಿಗಳಿಂದ ಪ್ರತ್ಯೇಕಿಸಲು ಡೇಟಾ ವಿಶ್ಲೇಷಣೆಯನ್ನು ಬಳಸಲು ಸೈಬರ್ ಫೂರೆನ್ಸಿಕ್ಸ್ ಘಟಕದಿಂದ ಕಾರ್ಯಸಾಧ್ಯವೇ ಎಂಬುದನ್ನು ಸೇರಿ ಎಲ್ಲ ಮಾಹಿತಿಯನ್ನು ಜುಲೈ 10ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು ಸರಕಾರ ಮತ್ತು
ಎನ್‌ಟಿಎಗೆ ಸುಪ್ರೀಂ ಕೋರ್ಟ್ ತಿಳಿಸಿದೆ.
Advertisement