Advertisement

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

09:08 PM May 21, 2024 | Team Udayavani |

ಬೀದರ್: ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ರದ್ದುಗೊಳಿಸುವ ರಾಜ್ಯದ ಕಾಂಗ್ರೆಸ್ ಸರ್ಕಾರ ಕ್ರಮದಿಂದ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೆಟ್ಟು ಬಿದ್ದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ ನಿಮಿತ್ತ ನಗರದ ಸಿದ್ಧಾರೂಢ ಆಯುರ್ವೇದಿಕ್ ವೈದ್ಯ ಕಾಲೇಜು ಮತ್ತು ಕರ್ನಾಟಕ ಕಾನೂನು ವಿದ್ಯಾಲಯದಲ್ಲಿ ಮಂಗಳವಾರ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಎನ್‌ಇಪಿ ಜಾರಿಗೊಳಿಸಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ರದ್ದುಗೊಳಿಸಿದೆ. ಈ ನಿರ್ಣಯ ರಾಜಕೀಯ ಪ್ರೇರಿತದಿಂದ ಕೂಡಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶೇ.30 ಗ್ರೇಸ್ ಮಾರ್ಕ್ಸ್ ನೀಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗುವುದು ಬಹಳ ಸುಲಭವಾಗಿದೆ. ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಕೇವಲ ಶೇ. 5ರಷ್ಟು ಅಂಕಗಳನ್ನು ಪಡೆದರು ಕೂಡ ಇದಕ್ಕೆ ಶೇ. 30ರಷ್ಟು ಗ್ರೇಸ್ ಮಾರ್ಕ್ಸ್ ಜೋಡಣೆಯಾಗಿ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಇದರಿಂದಾಗಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗಲಿದ್ದಾರೆ. ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ. ಜತೆಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸಹ ಬಿಜೆಪಿ ಮೇಲುಗೈ ಸಾಧಿಸಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಚಾರ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಸಂಸದ ಡಾ. ಉಮೇಶ್ ಜಾಧವ್, ಶಾಸಕ ಡಾ.ಸಿದ್ದು ಪಾಟೀಲ, ಎಂಎಲ್‌ಸಿ ರಘುನಾಥರಾವ ಮಲ್ಕಾಪುರೆ, ಮಾಜಿ ಶಾಸಕ ಎಂ.ಜಿ.ಮುಳೆ, ಬಿಡಿಎ ಮಾಜಿ ಅಧ್ಯಕ್ಷ ಬಾಬು ವಾಲಿ, ಪ್ರಮುಖರಾದ ಶಿವಾನಂದ ಮಂಠಾಳಕರ್, ಈಶ್ವರಸಿಂಗ್ ಠಾಕೂರ್, ಶಶಿಧರ ಹೊಸಳ್ಳಿ, ರೇವಣಸಿದ್ದಪ್ಪ ಜಲಾದೆ, ಪೀರಪ್ಪ ಯರನಳ್ಳಿ, ಉದಯಭಾನು ಹಲವಾಯಿ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next