Advertisement

ಆದೇಶ ಪಾಲಿಸದಿದ್ರೆ ಪರವಾನಗಿ ರದ್ದು

08:07 AM Jun 21, 2020 | Suhan S |

ಹರಿಹರ: ತಾಲೂಕಿನ ಖಾಸಗಿ ನರ್ಸಿಂಗ್‌ ಹೋಮ್‌, ಕ್ಲಿನಿಕ್‌ಗಳ ವೈದ್ಯರು ಸರ್ಕಾರಿ ಆದೇಶ ಪಾಲಿಸುತ್ತಿಲ್ಲ, ಈ ನಿರ್ಲಕ್ಷ ದೋರಣೆ ಮುಂದುವರೆದರೆ ಇಂತಹ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಅಪಾರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ ಎಚ್ಚರಿಸಿದರು.

Advertisement

ನಗರದ ಎಸ್‌ಜೆವಿಪಿ ಕಾಲೇಜಿನಲ್ಲಿ ಶನಿವಾರ ನಡೆದ ಖಾಸಗಿ ಆಸ್ಪತ್ರೆ ವೈದ್ಯರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿದಿನ ತಮ್ಮ ಬಳಿ ತಪಾಸಣೆಗೆ ಬರುವ ರೋಗಿಗಳ ರೋಗಲಕ್ಷಣ ಸೇರಿದಂತೆ ಸಂಪೂರ್ಣ ವರದಿಯನ್ನು ತಾಲೂಕು ಆರೋಗ್ಯ ಇಲಾಖೆಗೆ ಸಲ್ಲಿಸಲು ಈಗಾಗಲೆ ಹಲವು ಸಲ ಸೂಚಿಸಿದ್ದರೂ ನಿರ್ಲಕ್ಷಿಸಲಾಗುತ್ತಿದೆ. 10 ವರ್ಷದೊಳಗಿನ, 60 ವರ್ಷ ಮೇಲ್ಪಟ್ಟ ಹಾಗೂ ಮದುಮೇಹ, ಕ್ಯಾನ್ಸರ್‌, ಬಿಪಿ, ಶೀತ, ಕೆಮ್ಮು, ಜ್ವರ, ಗಂಟಲು ಕಡಿತ, ಉಸಿರಾಟ ತೊಂದರೆ ಕಂಡು ಬಂದತಂಹ ವ್ಯಕ್ತಿಗಳಿಗೆ ಕೂಡಲೇ ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕು. ಆದರೆ ಖಾಸಗಿ ಆಸ್ಪತ್ರೆ ವೈದ್ಯರು ತಾವೇ ಚಿಕಿತ್ಸೆ ನೀಡಿ ರೋಗ ಉಲ್ಬಣಗೊಂಡ ಮೇಲೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸುತ್ತಿರುವುದು ಕ್ರಿಮಿನಲ್‌ ಅಪರಾಧವಾಗುತ್ತದೆ ಎಂದರು.

ಡಿಎಚ್‌ಒ ಡಾ| ರಾಘವೇಂದ್ರಸ್ವಾಮಿ ಮಾತನಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಬಿಎಲ್‌ಓಗಳು ತಮ್ಮ ಕಾರ್ಯ ವ್ಯಾಪ್ತಿಯ ಮನೆ ಮನೆಗೆ ತೆರಳಿ ಗರ್ಭಿಣಿಯರು, ವೃದ್ಧರು, ಮಕ್ಕಳು, ಬೇರೆ ದೇಶ, ಹೊರ ರಾಜ್ಯಗಳಿಂದ ಬಂದವರ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ರೋಗ ಲಕ್ಷಣ ಕಂಡು ಬಂದರೆ ಕೂಡಲೇ ಪರೀಕ್ಷೆಗೆ ಕಳುಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಮೋಹನ್‌, ಪೌರಾಯುಕ್ತೆ ಎಸ್‌. ಲಕ್ಷ್ಮೀ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next