Advertisement
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
ನಗರ ಪ್ರದೇಶದಲ್ಲಿನ ಪಾಟ್ ಹೋಲ್‌ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ವೈಜ್ಞಾನಿಕ ರೀತಿಯಲ್ಲಿ ಹಂಪ್ಸ್‌ಗಳನ್ನು ನಿರ್ಮಿಸುವಂತೆ ಸೂಚನೆ ನೀಡಿದರು.
Advertisement
ಹೆದ್ದಾರಿಯಲ್ಲಿ ಎಚ್ಚರ ವಹಿಸಿರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಬ್ಲಾಕ್ ಸ್ಪಾಟ್‌ಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಸೂಚನಾ ಫಲಕಗಳನ್ನು ಅಳವಡಿಸಿ, ಪಾಟ್ ಹೋಲ್‌ಗಳನ್ನು ಮುಚ್ಚಲು ಅಗತ್ಯ ಕಾಮಗಾರಿ ಕೈಗೊಂಡು ಅಪಘಾತಗಳು ಸಂಭವಿಸದಂತೆ ಎಚ್ಚರವಹಿಸಬೇಕು. ಕೋಟ ಬಳಿಯ ಅಂಡರ್‌ಪಾಸನ್ನು ವಿಸ್ತರಿಸಿ ಏಕಕಾಲದಲ್ಲಿ ಎರಡು ವಾಹನಗಳು ಸಂಚರಿಸಲು ಸಾಧ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್‌ಗಳಿಗೆ ಸೂಚಿಸಿದರು. ಮಕ್ಕಳಿಗೆ ವಾಹನ ನೀಡಿದರೆ ಪೋಷಕರಿಗೆ ಜೈಲು ಶಿಕ್ಷೆ ಎಚ್ಚರಿಕೆ
18 ವರ್ಷಕ್ಕಿಂತ ಕೆಳಗಿನ ಮಕ್ಕಳು ರಸ್ತೆ ಸುರಕ್ಷಾ ನಿಯಮಗಳನ್ನು ಮೀರಿ, ವಾಹನ ಚಲಾಯಿಸುತ್ತಿರುವುದು ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಬಗ್ಗೆ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು. ಅಪ್ರಾಪ್ತ ವಯಸ್ಕರಿಗೆ ವಾಹನ ನೀಡಿದಲ್ಲಿ ಪೋಷಕರೂ ಸಹ ಜೈಲು ಶಿಕ್ಷೆಗೆ ಒಳಪಡುತ್ತಾರೆ. ಈ ಬಗ್ಗೆ ಎಚ್ಚರ ಮೂಡಿಸಿ ಎಂದರು. ಕಲ್ಸಂಕ ಸೇತುವೆ ವಿಸ್ತರಣೆ
ಕಲ್ಸಂಕ ಬಳಿ ಕೃಷ್ಣಮಠಕ್ಕೆ ಪ್ರವೇಶಿಸುವ ಸ್ಥಳದಲ್ಲಿನ ಸೇತುವೆಯನ್ನು ವಿಸ್ತರಿಸಿ ಅಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ರಾಜ್ಯ ರಸ್ತೆ ಸುರಕ್ಷಾ ಪ್ರಾಧಿಕಾರ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯಂತೆ, ಸಂಬಂಧಿಸಿದ ಇಲಾಖೆಗಳು ಕ್ರಿಯಾ ಯೋಜನೆಯ ಚಟುವಟಿಕೆಗಳು ಮತ್ತು ಅವುಗಳಿಗೆ ತಗಲುವ ಅಂದಾಜು ವೆಚ್ಚದ ವಿವರಗಳನ್ನು ಶೀಘ್ರದಲ್ಲಿ ಸಲ್ಲಿಸುವಂತೆ ಸೂಚಿಸಿದರು. ಜಿ.ಪಂ. ಸಿಇಒ ಡಾ| ನವೀನ್ ಭಟ್, ಎಡಿಸಿ ಸದಾಶಿವ ಪ್ರಭು, ಎಎಸ್ಪಿ ಕುಮಾರ್ ಚಂದ್ರ, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪಡ್ನೆಕರ್, ಪೌರಾಯುಕ್ತ ಉದಯ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.