Advertisement

ಅನಧಿಕೃತ ಬಿಪಿಎಲ್ ಕಾರ್ಡ್‌ ರದ್ದು

11:48 AM Sep 13, 2019 | Suhan S |

ದೇವನಹಳ್ಳಿ: ತಪ್ಪು ಮಾಹಿತಿ ನೀಡಿ ಅನಧಿಕೃತ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವುದು ಶಿಕ್ಷಾರ್ಹವಾಗಿದ್ದು, ಫ‌ಲಾನುಭವಿಗಳಲ್ಲದವರು ಸ್ವಯಂ ಪ್ರೇರಿತರಾಗಿ ಸರ್ಕಾರಕ್ಕೆ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಬೇಕೆಂದು ಜಿಲ್ಲಾ ಉಪನಿರ್ದೇಶಕ‌ ಆರ್‌.ಡಿ.ಸುಬ್ರಹ್ಮಣ್ಯ ತಿಳಿಸಿದ್ದಾರೆ.

Advertisement

ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕಿನಲ್ಲಿ ದುರ್ಬಲವಾಗಿ ಹಿಂದೂಳಿದ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸಸಲು ಸರ್ಕಾರದಿಂದ ಬಿಪಿಎಲ್ ಪಡಿತರ ಚೀಟಿ ವಿತರಿಸಿಲಾಗಿದ್ದು, ಆದರೆ ಅನೇಕ ಸ್ಥಿತಿವಂತ ಕುಟುಂಬದವರೂ ಸಹ ಪಡಿತರ ಆಹಾರ ಪದಾರ್ಥಗಳನ್ನು ಪಡೆಯುತ್ತಿದ್ದಾರೆ. ಅಂತವರು ಸೆ.30 ಒಳಗಾಗಿ ಅನರ್ಹ ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸಿದರೆ, ಪಡಿತರ ಚೀಟಿ ರದ್ದುಪಡಿಸಿ ಯಾವುದೇ ಕ್ರಮ ಜರುಗಿಸದೆ, ಎಪಿಎಲ್ ಪಡಿತರ ಚೀಟಿಯನ್ನು ನೀಡಲಾಗುವುದು ಎಂದು ಎಚ್ಚರಿಸಿದರು.

ಆದಾಯ ತೆರಿಗೆ ಪಾವತಿಸುತ್ತಿರುವ ಕುಟುಂಬದವರು, 10 ಚದರ ಅಡಿ ಅಥವಾ ಅದಕ್ಕಿಂತಲೂ ದೊಡ್ಡ ಮನೆ ಹೊಂದಿರುವವರು, ಸರ್ಕಾರಿ ನೌಕರರು ಸ್ವಾಯುತ್ತ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು, ಉದ್ಯಮಿಗಳು, ಸ್ವಂತ ವಾಹನ ದೊಂದಿರುವವರು, ಮನೆ-ಮಳಿಗೆ ಕಟ್ಟಡ ಕಟ್ಟಿ ಬಾಡಿಗೆ ವರಮಾನ ಪಡೆಯುತ್ತಿರುವವರು, ಬಹುರಾಷ್ಟ್ರೀಯ ಕಂಪನಿಯ ನೌಕರರು, ಉದ್ದಿಮೆದಾರರು, ನಿವೃತ್ತಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರು ಇನ್ನಿತರೆ ಆರ್ಥಿಕವಾಗಿ ಸಬಲವಾಗಿರುವ ಕುಟುಂಬಗಳು ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಪಡೆದು ಸರ್ಕಾರಕ್ಕೆ ವಂಚನೆ ಮಾಡಿರುವುದು ಕಂಡುಬಂದಿದೆ. ಸರ್ಕಾರದ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡವರ ವಿರುದ್ಧ 1977 ರ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಿಗದಿತ ಅವಧಿ ಮೀರಿದ ನಂತರ ಸರ್ಕಾರವೇ ಮನೆ-ಮನೆ ಸಮೀಕ್ಷೆ ಕೈಗೊಳ್ಳಲಿದ್ದು, ಈ ವೇಳೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಕಂಡುಬಂದಲ್ಲಿ ಅವರು ಪಡೆದ ದಿನಾಂಕದಿಂದ ಈ ತಿಂಗಳವರೆಗೆ ಪಡೆದಿರುವ ಅಕ್ಕಿ ಹಾಗೂ ಇತರೆ ಅಗತ್ಯ ವಸ್ತುಗಳ ಪ್ರಮಾಣವನ್ನು ಲೆಕ್ಕಾಚಾರ ಮಾಡಿ 1 ಕೆ,ಜಿ ಅಕ್ಕಿಗೆ 35/- ರೂ ನಂತೆ ಹಾಗೂ 1.ಕೆ.ಜಿ ತೊಗರಿ ಬೇಳೆಗೆ 100/- ರೂ ಅಂತೆ ಲೆಕ್ಕಾಚಾರ ಮಾಡಿ ಪೂರ್ಣ ಮೊತ್ತವನ್ನು ಸರ್ಕಾರಕ್ಕೆ ಸಂದಾಯ ಮಾಡಲು ಸೂಚಿಸಲಾಗುವದು ಎಂದರು.

ಸಾರ್ವಜನಿಕರು ಇದನ್ನು ಪಾಲಿಸದಿದ್ದಲ್ಲಿ 1977 ರ ಕಾಯ್ದೆಯಡಿ ಮೊಕದ್ದಮೆ ಹೂಡಲಾಗುವುದು. ಆದ್ದರಿಂದ ದಂಡನೆ ಹಾಗೂ ಶಿಕ್ಷೆ ತಪ್ಪಿಸಿಕೊಳ್ಳಲು ಸ್ವಯಂ ಪ್ರೇರಿತವಾಗಿ ನಿಗದಿತ ಅವಧಿಯೊಳಗೆ ಅನರ್ಹ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕೆಂದು ಮನವಿ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next