Advertisement

ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸಿ

08:33 AM Jun 12, 2020 | Suhan S |

ಹೊಳಲ್ಕೆರೆ: ಅಭಿವೃದ್ಧಿ ಹೆಸರಲ್ಲಿ ತಾಲೂಕಿನ ಕೃಷಿ ಭೂಮಿ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ನೀಡಿರುವ ಪರವಾನಗಿಯನ್ನು ತಕ್ಷಣ ರದ್ದುಗೊಳಿಸಬೇಕೆಂದು ಆಗ್ರಹಿಸಿ ತಾಲೂಕು ರೈತ ಸಂಘದ ವಿವಿಧ ಬಣಗಳ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

Advertisement

ತಾಲೂಕು ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಹಮ್ಮಿಕೊಂಡಿದ್ದ ಜಿಲ್ಲಾ ಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಪಾದಯಾತ್ರೆಯನ್ನು ತಾಲೂಕು ಆಡಳಿತ ತಡೆಯಿತು. ಹಾಗಾಗಿ ಪಟ್ಟಣದ ಗಣಪತಿ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಲಾಯಿತು. ಟಿ. ಎಮ್ಮಿಗನೂರು, ಆಡನೂರು, ಮೇಕೆನಹಟ್ಟಿ, ಅರಸನಘಟ್ಟ, ಪಾಡಿಗಟ್ಟೆ, ಮದ್ದೆನಹಳ್ಳಿ, ಅಪ್ಪರಸನಹಳ್ಳಿ, ದಾಸರಹಳ್ಳಿ, ಚನ್ನಪಟ್ಟಣ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆ ಕೃಷಿ ಕ್ಷೇತ್ರದ ಮೇಲೆ ವ್ಯತಿರಿಕ್ತ ಪ್ರಭಾವ ಬೀರುತ್ತಿದೆ. ಸ್ಫೋಟಕದಿಂದ ಕೆರೆ ಕಟ್ಟೆ ಏರಿಗಳು, ಮನೆಗಳ ಗೋಡೆಗಳು ಶಿಥಿಲಗೊಳ್ಳುತ್ತಿವೆ. ಹಾಗಾಗಿ ಕಲ್ಲು ಗಣಿಗಾರಿಕೆಯನ್ನು ರದ್ದು ಗೊಳಿಸಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಕೆ. ನಾಗರಾಜ್‌ ಪ್ರತಿಭಟನಾಕಾರರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ಕೂಡಲೇ ತಹಶೀಲ್ದಾರರನ್ನು ಅಮಾನತು ಮಾಡಬೇಕೆಂ+ದು ಆಗ್ರಹಿಸಿದರು.

ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್‌ ಬಣದ ರಾಜ್ಯ ಕಾರ್ಯದರ್ಶಿ ಈಚಘಟ್ಟದ ಸಿದ್ದವೀರಪ್ಪ, ತಾಲೂಕು ಅಧ್ಯಕ್ಷ ಬಸವರಾಜಪ್ಪ, ನಗರ ಘಟಕದ ಅಧ್ಯಕ್ಷ ಲೋಕೇಶ್‌, ಕಾರ್ಯದರ್ಶಿ ಅಜಯ್‌ ಇದ್ದರು. ರೈತ ಸಂಘದ ಪುಟ್ಟಣ್ಣಯ್ಯ ಬಣದ ತಾಲೂಕು ಅಧ್ಯಕ್ಷ ಡಿ. ಮಲ್ಲಿಕಾರ್ಜುನ್‌, ಗೌರವಾಧ್ಯಕ್ಷ ಕೆ. ರೇವಣಸಿದ್ದಪ್ಪ, ಕಾರ್ಯದರ್ಶಿ ಕೆ. ಮೋಹನ್‌ಕುಮಾರ್‌ ಪ್ರತ್ಯೇಕವಾಗಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next