Advertisement

ಇನ್ನು 5 ವರ್ಷದಲ್ಲಿ ಭಾರತದಲ್ಲಿ ಕ್ಯಾನ್ಸರ್ ಪ್ರಕರಣ 15.7ಲಕ್ಷಕ್ಕೆ ಏರಿಕೆ ಸಾಧ್ಯತೆ: ICMR 

10:22 AM Aug 19, 2020 | Nagendra Trasi |

ನವದೆಹಲಿ:ಭಾರತದಲ್ಲಿ ಪ್ರಸ್ತುತ 13.9 ಲಕ್ಷ ಮಂದಿ ಕ್ಯಾನ್ಸರ್ ರೋಗಿಗಳಿದ್ದು, ಇದು 2025ನೇ ಇಸವಿಗೆ 15.7ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆ ಇದ್ದಿರುವುದಾಗಿ ಐಸಿಎಂಆರ್ ಹಾಗೂ ಬೆಂಗಳೂರು ಮೂಲದ ನ್ಯಾಷನಲ್ ಸೆಂಟರ್ ಫಾರ್ ಡೀಸಿಸ್ ಇನ್ ಫಾರ್ಮಟಿಕ್ಸ್ ಆ್ಯಂಡ್ ರಿಸರ್ಚ್ ಬಿಡುಗಡೆಗೊಳಿಸಿದ ವರದಿಯಲ್ಲಿ ತಿಳಿಸಿದೆ.

Advertisement

ಐಎಂಸಿಆರ್ ಬಿಡುಗಡೆಗೊಳಿಸಿದ 2020ರ ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ವರದಿ ಪ್ರಕಾರ, ಪ್ರಸ್ತುತ ದೇಶದಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ 13.9ಲಕ್ಷ. ಪ್ರಸ್ತುತ ರೋಗಿಗಳ ಆಧಾರದ ಮೇಲೆ ಇದು 2025ರ ವೇಳೆಗೆ ಕ್ಯಾನ್ಸರ್ ಪೀಡಿತರ ಸಂಖ್ಯೆ 15.7 ಲಕ್ಷಕ್ಕೆ ತಲುಪುವ ಸಾಧ್ಯತೆ ಇದೆ ಎಂದು ತಿಳಿಸಿದೆ.

28 ಜನಸಂಖ್ಯೆ ಆಧಾರಿತ ಕ್ಯಾನ್ಸರ್ ದಾಖಲಾತಿಯಿಂದ ಮಾಹಿತಿ ಕಲೆಹಾಕಲಾಗಿದೆ. ಅಲ್ಲದೇ ಹೆಚ್ಚುವರಿಯಾಗಿ 58 ಆಸ್ಪತ್ರೆಗಳ ಕ್ಯಾನ್ಸರ್ ದಾಖಲಾತಿಯಿಂದ ದತ್ತಾಂಶ ಸೇರಿಸಲಾಗಿದೆ ಎಂದು ವರದಿ ಹೇಳಿದೆ.

ತಂಬಾಕು ಸಂಬಂಧಿ ಕ್ಯಾನ್ಸರ್ ಶೇ.27.1ರಷ್ಟಿದ್ದು, ಇದು 2020ರ ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ 3.7 ಲಕ್ಷದಷ್ಟಿದೆ. ಶ್ವಾಸಕೋಶ, ಹೊಟ್ಟೆ, ಗಂಟಲನಾಳ ಕ್ಯಾನ್ಸರ್ ಪುರುಷರಲ್ಲಿ ಕಂಡುಬರುವ ಸಾಮಾನ್ಯ ಕ್ಯಾನ್ಸರ್ ಗಳಾಗಿವೆ ಎಂದು ವರದಿ ತಿಳಿಸಿದೆ.

ಇನ್ನು 2ಲಕ್ಷ (ಶೇ.14.8)ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಕಾಣಿಸಿಕೊಂಡಿದೆ. 0.75ಲಕ್ಷ (ಶೇ.5.4ರಷ್ಟು) ದಷ್ಟು ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಹಾಗೂ ಮಹಿಳೆ ಮತ್ತು ಪುರುಷರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಜಠರ ಕ್ಯಾನ್ಸರ್ 2.7 ಲಕ್ಷ (ಶೇ.19.7ರಷ್ಟು)ದಷ್ಟು ಇದ್ದಿರುವುದಾಗಿ ಹೇಳಿದೆ.

Advertisement

ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ತಲೆ ಮತ್ತು ಕುತ್ತಿಗೆ, ಹೊಟ್ಟೆ, ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಹರಡುವಿಕೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next