Advertisement

ಶೂನಿಂದ ಕ್ಯಾನ್ಸರ್‌ ಭೀತಿ

05:16 PM Aug 29, 2018 | Team Udayavani |

ಭೋಪಾಲ್‌: ಮಧ್ಯಪ್ರದೇಶದಲ್ಲಿ ಬಡವರ್ಗದ ಶಾಲಾ ಮಕ್ಕಳಿಗೆ ಉಚಿತವಾಗಿ ಶೂ ನೀಡುವ ಯೋಜನೆ ಕ್ಯಾನ್ಸರ್‌ ಭೀತಿಯಿಂದಾಗಿ ಸ್ಥಗಿತಗೊಂಡಿದೆ. ಶೂಗಳ ಒಳಗೆ ಕ್ಯಾನ್ಸರ್‌ಕಾರಕ ರಾಸಾಯನಿಕವಿದೆ ಎಂದು ಸಂಶೋಧನಾ ಸಂಸ್ಥೆಯ ವರದಿ ಬಹಿರಂಗವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಸಕ್ತ ವರ್ಷಾಂತ್ಯದಲ್ಲೇ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಚರಣ್‌ ಪಾದುಕಾ ಯೋಜನಾ ಎಂಬ ಹೆಸರಿನಲ್ಲಿ ಮಕ್ಕಳಿಗೆ ಶೂ ಉಚಿತವಾಗಿ ವಿತರಿಸುವ ಯೋಜನೆಗೆ ಅದ್ದೂರಿ ಚಾಲನೆ ನೀಡಲಾಗಿತ್ತು. ಆದರೆ, ಸೆಂಟ್ರಲ್‌ ಲೆದರ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ ವರದಿಯಲ್ಲಿ, ಈ ಶೂಗಳ ಒಳಗೆ ಕ್ಯಾನ್ಸರ್‌ಕಾರಕ ಕಾರ್ಸಿನೋಜೆನಿಕ್‌ ಆ್ಯಝೋಡೈ ಬಳಸಲಾಗಿದೆ ಎಂದು ಹೇಳಿದ ಬೆನ್ನಲ್ಲೇ ಪೋಷಕರು ಆತಂಕಗೊಂಡಿದ್ದಾರೆ. ಹೀಗಾಗಿ, ಸುಮಾರು 2 ಲಕ್ಷ ಶೂಗಳ ವಿತರಣೆಯನ್ನೇ ಸ್ಥಗಿತಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next