Advertisement

ರಾಜ್ಯದ ವಿವಿಧೆಡೆ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ: ಸಚಿವ

10:57 PM Feb 04, 2020 | Team Udayavani |

ಬೆಂಗಳೂರು: ರಾಜ್ಯದ ಮೈಸೂರು, ಬಳ್ಳಾರಿ, ಶಿವಮೊಗ್ಗ, ಬೆಂಗಳೂರು ಮೆಡಿಕಲ್‌ ಕಾಲೇಜು ಹಾಗೂ ಹುಬ್ಬಳಿಯಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ತಿಳಿಸಿದರು. ಮಂಗಳವಾರ ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದ ನಂತರ ಮಾತನಾಡಿದರು.

Advertisement

ಈಗಾಗಲೇ ಮಂಡ್ಯದಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಇದೆ. ಉಳಿದಂತೆ ಬೆಂಗಳೂರು ಮೆಡಿಕಲ್‌ ಕಾಲೇಜು, ಮೈಸೂರು, ಬಳ್ಳಾರಿ, ಶಿವಮೊಗ್ಗ, ಹುಬ್ಬಳಿಯಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು. ಈ ಎಲ್ಲಾ ಕ್ಯಾನ್ಸರ್‌ ಕೇಂದ್ರಗಳ ನಿರ್ವಹಣೆಯನ್ನು ಕಿದ್ವಾಯಿ ಆಸ್ಪತ್ರೆ ಮಾಡಲಿದೆ ಎಂದು ತಿಳಿಸಿದರು. ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡುವ ಮೊದಲು ತನಗೆ ಬೇರೆಯದೇ ರೀತಿಯ ಕಲ್ಪನೆ ಇತ್ತು.

ಇಲ್ಲಿ ಬಂದು ನೋಡಿದ ನಂತರ ತನ್ನ ಅಭಿಪ್ರಾಯ ಸಂಪೂರ್ಣ ಬದಲಾ ಯಿತು. ನೊಂದು ಬರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ವ್ಯವಸ್ಥೆ ಇರುವುದನ್ನು ಕಂಡು ಬೆರಗಾಗಿದ್ದೇನೆ. ಅಂತಾರಾಷ್ಟ್ರೀಯ ಮಟ್ಟದ ಚಿಕಿತ್ಸಾ ಸೌಲಭ್ಯ ಮತ್ತು ವ್ಯವಸ್ಥೆ ಇಲ್ಲಿದೆ. ಇನ್ನೂ ಉತ್ತಮ ಸೇವೆಗಾಗಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಪ್ರಯತ್ನ ಮಾಡಲಾ ಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next