Advertisement

Expert’s Opinion: ಸರಕಾರಿ ಆಸ್ಪತ್ರೆಗಳಲ್ಲಿ ಕ್ಯಾನ್ಸರ್‌ ಚಿಕಿತ್ಸೆ ಸ್ವಾಗತಾರ್ಹ

11:34 PM Feb 16, 2024 | Team Udayavani |

ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸರಕಾರಿ ಆಸ್ಪತ್ರೆ ಗಳಲ್ಲಿ ಕ್ಯಾನ್ಸರ್‌ ಪತ್ತೆ ಹಾಗೂ ಚಿಕಿತ್ಸೆಗೆ ಅಗತ್ಯವಿ ರುವ ವ್ಯವಸ್ಥೆ ಕಲ್ಪಿಸಿರುವುದು ಶ್ಲಾಘನೀಯ ಎಂದು ಮಣಿಪಾಲ ಸಮೂಹ ಆಸ್ಪತ್ರೆ ಅಧ್ಯಕ್ಷ ಡಾ. ಸುದರ್ಶನ ಬಲ್ಲಾಳ್‌ ಹೇಳಿದ್ದಾರೆ.

Advertisement

ಬಜೆಟ್‌ ಸಮತೋಲನ ಕಾಯ್ದುಕೊಂಡಿದೆ. ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಹಾಗೂ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಲಾಗಿದೆ. ಕ್ಯಾನ್ಸರ್‌ ರೋಗಿಗಳ ಚಿಕಿತ್ಸೆಗೆ ಜಿಲ್ಲೆಗೊಂದು ಡೇ-ಕೇರ್‌ ಕಿಮೋಥೆರಪಿ ಸೆಂಟರ್‌, ಪ್ರಾರಂಭಿಕ ಹಂತದ ಸ್ತನ ಹಾಗೂ ಗರ್ಭಕಂಠದ ಕ್ಯಾನ್ಸರ್‌ ಪತ್ತೆ ಮಾಡಿ, ಚಿಕಿತ್ಸೆ ನೀಡಲು ಅಗತ್ಯವಿರುವ ಡಿಜಿಟಲ್‌ ಮೆಮೋಗ್ರಾಫಿ ಯಂತ್ರ ಹಾಗೂ ಕಲ್ಪಾಸ್ಕೋಪಿ ಉಪಕರಣಗಳನ್ನು ಸರಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಆಳವಡಿಸಿಕೊಳ್ಳಲು ಮುಂದಾಗಿರುವುದು ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಆರ್ಥಿಕ ತೊಂದರೆಗೆ ಒಳಗಾಗಿ ಚಿಕಿತ್ಸೆಯಿಂದ ದೂರ ಉಳಿಯುತ್ತಿದ್ದ ಕ್ಯಾನ್ಸರ್‌ ರೋಗಿಗಳಿಗೆ ಈ ವ್ಯವಸ್ಥೆ ವರದಾನವಾಗಿ ಪರಿಣಮಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್‌ ವೇಳೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಮುಖ್ಯ ಪಾತ್ರವಹಿಸಿದ ಟೆಲಿ ಐಸಿಯುವನ್ನು ವ್ಯವಸ್ಥೆಯನ್ನು ಇದೀಗ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಿಸಲಾಗಿದೆ. ಗ್ರಾಮೀಣ ಭಾಗದವರಿಗೆ 24ಗಿ7 ತುರ್ತು ಆರೋಗ್ಯ ಸೇವೆ ಹಿನ್ನಲೆಯಲ್ಲಿ ಆರೋಗ್ಯ ಕ್ಷೇಮ ಕೇಂದ್ರ ಸ್ಥಾಪನೆ, ಕ್ಷಯ ರೋಗ ನಿರ್ಮೂಲನೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಆರೋಗ್ಯ ಸಂರಕ್ಷಣೆಗೆ ಹಿನ್ನಲೆಯಲ್ಲಿ ಬೆಂಗಳೂರು ಕೆ.ಸಿ. ಜನರಲ್‌ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದ ಮೂಲಸೌಕರ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದಿದ್ದಾರೆ.

ಡಾ. ಸುದರ್ಶನ ಬಲ್ಲಾಳ್‌, ಅಧ್ಯಕ್ಷರು, ಮಣಿಪಾಲ ಸಮೂಹ ಆಸ್ಪತ್ರೆ

Advertisement

Udayavani is now on Telegram. Click here to join our channel and stay updated with the latest news.

Next