Advertisement
ಧರ್ಮಸ್ಥಳದಲ್ಲಿ ಅ. 24ರಂದು ನೆರವೇರಿದ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಸಮಾರಂಭದಲ್ಲಿ ಅವರು ಮಾತನಾಡಿ ಹೊಸ ಯೋಜನೆಗಳನ್ನು ಪ್ರಕಟಿಸಿದರು.
Related Articles
Advertisement
ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಮತ್ತು ವಿಸ್ತರಣೆಯಲ್ಲಿ ಪ್ರೊ| ಎಸ್. ಪ್ರಭಾಕರ್ ಅವರ ಸಲಹೆ ಮತ್ತು ಸಹಕಾರವನ್ನು ಅವರು ವಿಶೇಷವಾಗಿ ಉಲ್ಲೇಖಿಸಿದರು.
ಧಾರವಾಡದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ| ನ. ವಜ್ರಕುಮಾರ್, ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಮತ್ತು ಇತ್ತೀಚೆಗೆ ನಿಧನರಾದ ಕಟ್ಟಡ ಕಾಮಗಾರಿ ವಿಭಾಗದ ಗೋಪಾಲ್ ಮೆನನ್ ಅವರ ಸೇವೆಯನ್ನು ಸ್ಮರಿಸಿದ ಹೆಗ್ಗಡೆಯವರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಶಾಸಕ ಕೆ. ಹರೀಶ್ ಪೂಂಜ ಮಾತನಾಡಿ, ಹೆಗ್ಗಡೆಯವರ ಬಹುಮುಖೀ ಸಮಾಜಸೇವೆಯಿಂದಾಗಿ ಬೆಳ್ತಂಗಡಿ ತಾಲೂಕು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಿದೆ. ಹೆಗ್ಗಡೆಯವರ ಎಲ್ಲ ಯೋಚನೆಗಳು ಹಾಗೂ ಯೋಜನೆಗಳು ಆದರ್ಶ ಮತ್ತು ಅನುಕರಣೀಯವಾಗಿವೆ ಎಂದು ಹೇಳಿ ಅಭಿನಂದಿಸಿದರು.
ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ ಹೆಗ್ಗಡೆಯವರು ದೃಢಸಂಕಲ್ಪದಿಂದ ಮಾಡುತ್ತಿರುವ ಸೇವಾಕಾರ್ಯಗಳು ಸಾರ್ವತ್ರಿಕ ಮಾನ್ಯತೆ ಮತ್ತು ಗೌರವ ಹೊಂದಿವೆ ಎಂದು ಹೆಗ್ಗಡೆಯವರು ಅಭಿನಂದಿಸಿದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್. ಸುಪ್ರಿಯಾ ಹರ್ಷೇಂದ್ರ ಕುಮಾರ್. ಡಿ. ರಾಜೇಂದ್ರ ಕುಮಾರ್‌ಮತ್ತು ನೀತಾ ರಾಜೇಂದ್ರ ಕುಮಾರ್, ಶ್ರದ್ಧಾ ಅಮಿತ್ ಮತ್ತು ಅಮಿತ್ ಉಪಸ್ಥಿತರಿದ್ದರು. ಊರಿನ ನಾಗರಿಕರು, ಅಭಿಮಾನಿಗಳು ಮತ್ತು ಭಕ್ತರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ ನೆರವೇರಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮಾ ಸ್ವಾಗತಿಸಿದರು. ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿಯ ಸಂಚಾಲಕ ಲಕ್ಷ್ಮೀನಾರಾಯಣ ರಾವ್ ವಂದಿಸಿದರು. ಎಸ್‌ಡಿಎಂ ಸನಿವಾಸ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು.
ಹೈನುಗಾರಿಕೆ ಅಭಿವೃದ್ಧಿತಮ್ಮ ಸಂಸದರ ನಿಧಿಯಿಂದ 2.50 ಕೋಟಿ ರೂ. ಅನುದಾನವನ್ನು ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದು ಹೆಗ್ಗಡೆಯವರು ತಿಳಿಸಿದರು. ಹಾಲು ಮತ್ತು ಹಣ್ಣು ನಿತ್ಯ ಆದಾಯ ಕೊಡುವ ಮೂಲಗಳಾಗಿದ್ದು ಇವುಗಳ ಉತ್ಪಾದನೆಗೆ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ ಎಂದು ತಿಳಿಸಿದರು.