Advertisement

2 ದಿನಗಳಲ್ಲಿ ಅಭ್ಯರ್ಥಿ ಬಿಜೆಪಿ ಕೋರ್‌ ಕಮಿಟಿ ತೀರ್ಮಾನ

01:23 AM Nov 10, 2021 | Team Udayavani |

ಬೆಂಗಳೂರು: ಸ್ಥಳೀಯ ಸಂಸ್ಥೆ ಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾ ವಣೆ ಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ, ಅನಂತರ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕೋರ್‌ ಕಮಿಟಿ ತೀರ್ಮಾನಿಸಿದೆ.

Advertisement

ಬೇರೆ ಪಕ್ಷಗಳಿಂದ ಬಿಜೆಪಿಗೆ ಬರಲು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ಆ ಬಗ್ಗೆಯೂ ಜಿಲ್ಲೆಯ ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು ವರದಿ ಸಲ್ಲಿಸುವಂತೆ ಸೂಚಿಸ ಲಾಗಿದೆ ಎಂದು ತಿಳಿದು ಬಂದಿದೆ.

ವಿಧಾನಪರಿಷತ್‌ ಚುನಾವಣೆಯಷ್ಟೇ ಅಲ್ಲದೆ, ಜಿಲ್ಲಾ ಮತ್ತು ತಾ.ಪಂ. ಹಾಗೂ ಬಿಬಿಎಂಪಿ ಚುನಾವಣೆಗೂ ಸಜ್ಜಾಗ ಬೇಕು. ಕೇಂದ್ರ – ರಾಜ್ಯ ಸರಕಾರಿ ಯೋಜನೆಗಳ ಬಗ್ಗೆ ಜನ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಬೇಕು ಎಂದು ತಿಳಿಸಲಾಯಿತು ಎನ್ನಲಾಗಿದೆ.

ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಸಂಬಂಧ 2 ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಗೊಳಿಸ ಲಾಗುವುದು ಎಂದು ಸಭೆಯ ಅನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋರ್‌ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಕುರಿತು ಚರ್ಚೆಯಾಗಿದೆ. ಜಿಲ್ಲೆಗಳಿಂದ ಶಾಸಕರು, ಸಂಸದರು ಮತ್ತು ಮುಖಂಡರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿ ಎರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಸಿದ್ಧ ಪಡಿಸಲಾಗುವುದು.

Advertisement

ಇದನ್ನೂ ಓದಿ:ಭಾರತೀಯ ನೌಕಾಪಡೆಗೆ ಐಎನ್‌ಎಸ್‌ ವೇಲಾ ಸೇರ್ಪಡೆ

ಅಭ್ಯರ್ಥಿಗಳ ಬಗ್ಗೆ ಈಗಾಗಲೇ ಚರ್ಚೆ ನಡೆದಿತ್ತಾದರೂ ಜಿಲ್ಲಾ ಮಟ್ಟ ದಲ್ಲಿ ಅಭಿಪ್ರಾಯ ಸಂಗ್ರಹ ಮಾಡಲು ಕೋರ್‌ ಕಮಿಟಿ ಸಭೆ ಯಲ್ಲಿ ತೀರ್ಮಾನವಾಯಿತು. ಅದ ರಂತೆ ಎರಡು ದಿನಗಳ ಕಾಲ ಅಭಿ ಪ್ರಾಯ ಪಡೆದು ವರದಿ ನೀಡಿದ ಅನಂತರ ರಾಜ್ಯಾಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ.

ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಪಕ್ಷಗಳಿಂದ ಬರುವವರ ಬಗ್ಗೆ ಕೋರ್‌ ಕಮಿಟಿಯಲ್ಲಿ ಚರ್ಚೆ ಯಾಗಿದೆ. ಆದರೆ ಟಿಕೆಟ್‌ ನೀಡುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ.

ಎರಡು ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆ ಬಗ್ಗೆಯೂ ಚರ್ಚೆಯಾಗಿದೆ. ಎಲ್ಲ ಕ್ಷೇತ್ರಗಳಲ್ಲಿ 2- 3 ಹೆಸರುಗಳು ಪ್ರಸ್ತಾವಗೊಂಡಿವೆ. ಪರಿಶೀಲಿಸಿ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ನ. 18ರಿಂದಲೇ ಜನಸ್ವರಾಜ್‌ ಯಾತ್ರೆ
ಜನಸ್ವರಾಜ್‌ ಯಾತ್ರೆಯನ್ನು ನ. 19ರ ಬದಲು ನ. 18  ರಿಂದಲೇ ಪ್ರಾರಂಭಿಸಲಾಗುವುದು. ನಾಲ್ಕು ತಂಡಗಳಲ್ಲಿ ರಾಜ್ಯಾದ್ಯಂತ ಜನಸ್ವರಾಜ್‌ ಯಾತ್ರೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next