Advertisement
“ಕೆಪಿಎಸ್‌ಸಿ ನೇಮಕಾತಿ ರದ್ದುಕೋರಿ ಸಲ್ಲಿಸಿರುವ ಪಿಐಎಲ್ ವಿಚಾರಣೆ ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಇದೆಯೇ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್ ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ ಸರ್ಕಾರದ ಪರ ವಕೀಲರಿಗೆ ಪ್ರಶ್ನಿಸಿತು. ಈ ವೇಳೆ ಸರ್ಕಾರದ ಪರ ವಕೀಲರು, ಸಂದರ್ಶನಕ್ಕೆ ಆಯ್ಕೆಯಾದ 46 ಅಭ್ಯರ್ಥಿಗಳು ಹಾಗೂ ಕೆಪಿಎಸ್‌ಸಿ ಸದಸ್ಯರ ನಡುವೆ ಹಲವು ಬಾರಿ ದೂರವಾಣಿ ಕರೆಗಳ ವಿನಿಮಯವಾಗಿದೆ ಎಂದು ಸಿಐಡಿ ವರದಿಯಲ್ಲಿದೆ. ಈ ಪಟ್ಟಿಯಲ್ಲಿ ಡಾ.ಮೈತ್ರಿಯಾ ಅವರೂ ಇದ್ದಾರೆ. ಆದರೆ, ಯಾರು, ಯಾರಿಗೆ, ಯಾವ ಉದ್ದೇಶಕ್ಕೆ ಕರೆ ಮಾಡಿದ್ದರು ಎಂಬ ಬಗ್ಗೆ ನಿಖರತೆಯಿಲ್ಲ. ಸಂದರ್ಶನಕ್ಕೆ ಹಾಜರಾಗಬೇಕೆಂಬ ಮಾಹಿತಿ ನೀಡಲು ಕರೆ ಮಾಡಿರಬಹುದುಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೇಮಕಾತಿ ಪ್ರಕ್ರಿಯೆಯ ಅಂಗವಾಗಿ ಔಪಚಾರಿಕ ಕರೆಯೂ
ಮಾಡಿರಬಹುದು ಎಂದಿತು.
ದುರುದ್ದೇಶದಿಂದ ಕೂಡಿದೆ. ಅರ್ಜಿದಾರರಲ್ಲಿ ಕೆಲವರು ಲಿಖೀತ ಪರೀಕ್ಷೆಯಲ್ಲಿಯೇ ಉತ್ತೀರ್ಣರಾಗಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಜೊತೆಗೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ತಕ್ಷಣ ಸಾಂವಿಧಾನಿಕ ಸಂಸ್ಥೆಯ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹರ್ಯಾಣ ಹೈಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖೀಸಿದರು. ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ ಗುರುವಾರಕ್ಕೆ ವಿಚಾರಣೆ ಮುಂದೂಡಿತು.