ಬೆಂಗಳೂರು: ಕೋಲಾರ, ತುಮಕೂರು, ಬಾಗಲಕೋಟೆ, ಚಿಕ್ಕಬಳ್ಳಾಪುರ, ಬಳ್ಳಾರಿ,ಚಿಕ್ಕೋಡಿ ಕ್ಷೇತ್ರಗಳಿಂದ ಜೆಡಿಯು
ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತಿಸಲಾಗಿದೆ.
ಕೆಲ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿಗೆ ಮನವಿ ಮಾಡಿದ್ದು,ಸ್ವತಂತ್ರವಾಗಿಯೂ ಸ್ಪರ್ಧಿಸಲು ಸಿದ್ಧರಿದ್ದೇವೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ಅಭ್ಯರ್ಥಿಗಳು 28 ಲೋಕಸಭಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಿಲ್ಲ. ಆಯ್ದ ಕೆಲ ಕ್ಷೇತ್ರಗಳಲ್ಲಷ್ಟೇ ಕಣಕ್ಕಿಳಿಯಲಿದ್ದಾರೆ.
ಏಕಾಂಗಿಯಾಗಿ ಚುನಾವಣೆ ಎದುರಿಸುವ ಬದಲಿಗೆ ಬಿಜೆಪಿಯೊಂದಿಗೆ ಚುನಾವಣೆಗೆ ಹೋಗುವ ಚಿಂತನೆ ಇತ್ತು. ಅದರಂತೆ ಕೆಲ ಕ್ಷೇತ್ರ ಬಿಟ್ಟುಕೊಡುವಂತೆ ಬಿಜೆಪಿ ಬಳಿ ಮನವಿ ಕೂಡ ಮಾಡಲಾಗಿತ್ತು. ಆದರೆ ಬಿಜೆಪಿ ಹಿರಿಯ ನಾಯಕರು ಸ್ಪಂದಿಸಲಿಲ್ಲ. ಹೀಗಾಗಿ, ಸ್ವತಂತ್ರವಾಗಿ ಸ್ಪರ್ಧಿಸಲು ಸಿದಟಛಿವಿದ್ದು, ಈಗಾಗಲೇ ಸರ್ವೇ ನಡೆಸುವಂತೆ ಏಜೆನ್ಸಿಯೊಂದಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿಕುಮಾರಸ್ವಾಮಿ ಹಾಗೂ ನಿಖೀಲ್ ಕುಮಾರಸ್ವಾಮಿ ನಮಗೆ ಪರಿಚಿತರು. ಅಂಬರೀಶ್ ಹಾಗೂ ಸುಮಲತಾ ನಮ್ಮ ಮನೆಯವರಿದ್ದಂತೆ. ಹಾಗಾಗಿ ಬೆಂಬಲ ಕೋರಿದರೆ ನೀಡಲಾಗುವುದು. ಕಾಂಗ್ರೆಸ್ ಪಕ್ಷವು ಸುಮಲತಾ ಅವರಿಗೆ ಟಿಕೆಟ್ ನೀಡಬಹುದಿತ್ತು ಎಂದರು.