Advertisement

ಸಾಲ ವಸೂಲಿ ವೇಳೆ ಬೆದರಿಕೆ ಹಾಕುವಂತಿಲ್ಲ: ಆರ್‌ಬಿಐ

12:16 AM Aug 13, 2022 | Team Udayavani |

ಮುಂಬಯಿ: ಸಾಲ ವಸೂಲು ಮಾಡುವ ನಿಟ್ಟಿನಲ್ಲಿ ರಿಕವರಿ ಏಜೆಂಟರು ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಅನಂತರ ಪೋನ್‌ ಮಾಡಿ ಬೆದರಿಕೆ ಹಾಕುವಂತಿಲ್ಲ ಎಂದು ಆರ್‌ಬಿಐ ಶುಕ್ರವಾರ ಹೊಸ ಸುತ್ತೋಲೆ ಬಿಡುಗಡೆ ಮಾಡಿದೆ.

Advertisement

ಬ್ಯಾಂಕೇತರ ವಿತ್ತೀಯ ಸಂಸ್ಥೆಗಳು (ಎನ್‌ಬಿಎಫ್ಸಿ), ಆಸ್ತಿ ಪುನರ್‌ರಚನೆ ಸೇವೆ ನೀಡುವ ಕಂಪೆನಿಗಗಳಿಗೆ (ಎಆರ್‌ಸಿ) ಹೊಸ ನಿಯಮ ಅನ್ವಯವಾಗಲಿದೆ. ಈ ಹಿಂದೆಯೇ ಹೊರಡಿಸಲಾಗಿರುವ ನಿಯಮಗಳನ್ನು ಸಂಸ್ಥೆಗಳು ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿದೆ.

ಹೀಗಾಗಿ, ಹೊಸ ಸುತ್ತೋಲೆ ಹೊರಡಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಸಾಲ ವಸೂಲು ಮಾಡುವ ಸಂದರ್ಭದಲ್ಲಿ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳ ಪ್ರತಿನಿಧಿಗಳು ಬಲಪ್ರಯೋಗ, ಕಿರುಕುಳ ನೀಡುವಂಥ ಕ್ರಮಗಳನ್ನು ಅನುಸರಿಸುವಂತೆಯೇ ಇಲ್ಲ. ಅನಪೇಕ್ಷಿತ ಸಂದೇಶಗಳನ್ನು, ಅನಾಮಧೇಯರ ಹೆಸರಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಬಳಿಕ ಫೋನ್‌ ಮಾಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ಆರ್‌ಬಿಐ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next