ಬೆಳಗಾವಿ: ನನಗೆ ಇನ್ನೊಂದು ತಿಂಗಳಲ್ಲಿ 80 ವರ್ಷ ಆಗಲಿದೆ. ಆದ್ದರಿಂದ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯದೆಲ್ಲೆಡೆ ಸಂಚರಿಸಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವ ಪ್ರಶ್ನೆಯೇ ಇಲ್ಲ. ವಾಜಪೇಯಿ ನನ್ನನ್ನು ಆಹ್ವಾನಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಬಿಜೆಪಿ ನನಗೆ ಎಲ್ಲ ಸ್ಥಾನಮಾನಗಳನ್ನು ನೀಡಿದೆ. ಆ ಋಣ ತೀರಿಸುವುದು ನನ್ನ ಜವಾಬ್ದಾರಿ ಎಂದರು.
ನಿವೃತ್ತಿ ಇಲ್ಲ ಈಗಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಹಾಗೆಂದು ರಾಜಕೀಯದಿಂದ ನಿವೃತ್ತನಾಗಿಲ್ಲ ಎಂದು ಹೇಳಿದರು.