Advertisement

Supreme Court 40 ವರ್ಷ ದುಡಿದವರಿಗೆ ನಿವೃತ್ತಿ ಪ್ರಯೋಜನ ನಿರಾಕರಿಸುವಂತಿಲ್ಲ

07:30 PM May 25, 2024 | Team Udayavani |

ನವದೆಹಲಿ: ಸುಮಾರು 30-40 ವರ್ಷಗಳ ಕಾಲ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿರುವವರಿಗೆ ನಿವೃತ್ತಿ ನಂತರದ ಸೌಲಭ್ಯಗಳನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಶನಿವಾರ ಹೇಳಿದೆ.

Advertisement

ಉತ್ತರ ಪ್ರದೇಶದ ದಿನಗೂಲಿ ನೌಕರರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಅಲಹಾಬಾದ್‌ ಹೈಕೋರ್ಟ್‌ನ ವಿಭಾಗೀಯ ಪೀಠ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ. ಇಲ್ಲಿ ಅರ್ಜಿ ಸಲ್ಲಿಕೆ ಮಾಡಿರುವವರು ಸುದೀರ್ಘ‌ ಅವಧಿಗೆ ಕೆಲಸ ಮಾಡಿದ್ದಾರೆ. ಈ ಅಂಶವನ್ನು ಪರಿಗಣಿಸಿ, ಸಾಮಾನ್ಯ ಸರ್ಕಾರಿ ನೌಕರರಿಗೆ ನೀಡಬಹುದಾದ ನಿವೃತ್ತಿ ನಂತರದ ಪ್ರಯೋಜನಗಳನ್ನು ನೀಡಬೇಕು ಎಂದು ನ್ಯಾಯಪೀಠ ಹೇಳಿದೆ.

ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಅರ್ಜಿದಾರರನ್ನು 1979ರಲ್ಲಿ ಗೋರಖ್‌ಪುರ ಜಿಲ್ಲಾ ಕಚೇರಿಯಲ್ಲಿ ಕ್ಲರ್ಕ್‌ ಆಗಿ ನೇಮಕಗೊಂಡಿದ್ದರು. 1981ರಲ್ಲಿ ಈ ಜಿಲ್ಲೆ ವಿಭಜನೆಯಾದ ಬಳಿಕ ಕೆಲವರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಕೆಲಸದಲ್ಲಿ ಉಳಿದುಕೊಂಡವರು ದಿನಗೂಲಿ ನೌಕರರಾಗಿ ನಿವೃತ್ತಿವರೆಗೂ ದುಡಿದಿದ್ದಾರೆ. ಹೀಗಾಗಿ ಅವರಿಗೆ ಅವರಿಗೆ ಪಾವತಿಸುವ ಬಗ್ಗೆ ಯಾವುದೇ ವಿವಾದಗಳಿಲ್ಲ ಎಂದು ಹೇಳಿತು.

ಮೊದಲು ಈ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್‌ ಹೈಕೋರ್ಟ್‌ನ ಏಕ ಸದಸ್ಯ ಪೀಠ, ಅರ್ಜಿದಾರರಿಗೆ ಸೌಲಭ್ಯಗಳನ್ನು ನೀಡುವಂತೆ ಸೂಚಿಸಿತ್ತು. ಬಳಿಕ ವಿಭಾಗೀಯ ಪೀಠ ಈ ಆದೇಶವನ್ನು ರದ್ದುಗೊಳಿಸಿತ್ತು. ಹೀಗಾಗಿ ಅರ್ಜಿದಾರರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next