Advertisement

Congress ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಲಾರೆ: ಡಿ.ಕೆ. ಶಿವಕುಮಾರ್‌

11:46 PM Aug 14, 2023 | Team Udayavani |

ಬೆಂಗಳೂರು: ಪಕ್ಷ ಅಥವಾ ಸರಕಾರಕ್ಕೆ ಮುಜುಗರ ಉಂಟುಮಾಡುವ ಹಾಗೂ ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವುದೇ ಕೆಲಸವನ್ನು ನಾನು ಮಾಡುವುದಿಲ್ಲ. ನನ್ನ ಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗುಡುಗಿದರು.

Advertisement

ಕ್ವಿನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪಕ್ಷದ ಸಾಮಾನ್ಯ ಸಭೆಯಲ್ಲಿ ತಮ್ಮ ವಿರುದ್ಧ ವಿಪಕ್ಷಗಳು ಮಾಡಿರುವ ಆರೋಪ ಗಳಿಗೆ ತಿರುಗೇಟು ನೀಡಿದ ಅವರು, ಬೇರೆಯವರಂತೆ ಹೆದರಿಸಿದಂತೆ ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಆಡಳಿತದ ಭ್ರಷ್ಟಾಚಾರಗಳನ್ನು ಬಯಲು ಮಾಡುತ್ತೇನೆ ಎಂದು ಹೇಳಿದರು.

ಸರಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿ ನಾಯಕರು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನಮಗೆ ನೈಜತೆ ನೋಡಿ ಬಿಲ್‌ ಪಾವತಿ ಮಾಡಿ ಎಂದು ಹೇಳಿದ್ದಾರೆ. ಅದಕ್ಕೆ ನಾವು ತನಿಖೆ ಆರಂಭಿಸಿದ್ದೇವೆ. ಈ ತನಿಖೆ ಆರಂಭಿಸಿದ ತತ್‌ಕ್ಷಣ ನಮ್ಮ ವಿರುದ್ಧ ಕಮಿಷನ್‌ ಆರೋಪ ಮಾಡುತ್ತಿದ್ದಾ ರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next