ನವದೆಹಲಿ: ಕೋವಿಡ್ 19 ಲಸಿಕೆ ಹಾಕಿಸಿಕೊಳ್ಳುವಂತೆ ಯಾವುದೇ ವ್ಯಕ್ತಿಯನ್ನು ಬಲವಂತಪಡಿಸುವಂತಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್, ಕೋವಿಡ್ 19 ಕುರಿತ ಪ್ರಸ್ತುತ ಲಸಿಕೆಯ ನೀತಿ ತೃಪ್ತಕರವಾಗಿದೆ. ಕೋವಿಡ್ ಮಾರ್ಗಸೂಚಿಯನ್ನು ಅಸಮಂಜಸ ಅಥವಾ ನಿರಂಕುಶ ಘೋಷಣೆ ಎಂದು ಹೇಳುವಂತಿಲ್ಲ ಎಂದು ಸೋಮವಾರ (ಮೇ 2) ತಿಳಿಸಿದೆ.
ಇದನ್ನೂ ಓದಿ:ಬಿಟ್ ಕಾಯಿನ್ ತನಿಖೆ ಚುರುಕುಗೊಂಡರೆ ಬಿಜೆಪಿಯಿಂದ 3ನೇ ಸಿಎಂ ಸಿಗಲಿದ್ದಾರೆ: ಪ್ರಿಯಾಂಕ ಖರ್ಗೆ
ಕೆಲವು ರಾಜ್ಯ ಸರ್ಕಾರಗಳು ಕೋವಿಡ್ ಲಸಿಕೆ ಪಡೆಯದವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶ ನಿರ್ಬಂಧಿಸಿರುವ ಕ್ರಮ ಸಮರ್ಪಕವಾಗಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದ್ದು, ಅಲ್ಲದೇ ಪ್ರಸ್ತುತ ಚಾಲ್ತಿಯಲ್ಲಿರುವ ಇಂತಹ ಷರತ್ತುಗಳನ್ನು ರಾಜ್ಯ ಸರ್ಕಾರಗಳು ವಾಪಸ್ ಪಡೆಯಬೇಕು ಎಂದು ಸೂಚಿಸಿರುವುದಾಗಿ ವರದಿ ವಿವರಿಸಿದೆ.
ಮತ್ತೊಂದೆಡೆ ಕೋವಿಡ್ 19 ಲಸಿಕೆಯಿಂದಾದ ಅಡ್ಡಪರಿಣಾಮದ ಕುರಿತ ಅಂಕಿಅಂಶವನ್ನು ಕೇಂದ್ರ ಸರ್ಕಾರ ಬಹಿರಂಗಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಭಾರತದಲ್ಲಿ ಸೋಮವಾರ 3,157 ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, 26 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.