Advertisement

ಭಾವನಾತ್ಮವಾಗಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ:  ವಿಶ್ವನಾಥ್‌

09:11 PM Jun 05, 2024 | |

ಮೈಸೂರು: ಅಯೋಧ್ಯೆಯ ಶ್ರೀರಾಮನ ಹೆಸರನ್ನು ಬಳಕೆ ಮಾಡಿಕೊಂಡು ಭಾವನಾತ್ಮಕವಾಗಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬ ಎಚ್ಚರಿಕೆಯನ್ನು ಜನರು ಬಿಜೆಪಿಗೆ ನೀಡಿದ್ದಾರೆ ಎಂದು ಎಂಎಲ್‌ಸಿ ಎಚ್‌. ವಿಶ್ವನಾಥ್‌ ಹೇಳಿದರು.

Advertisement

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲೇ ಬಿಜೆಪಿಗೆ ಸೋಲಾಗಿದೆ. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋದರೆ ಜನರು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ. ಅದರ ಬದಲಾಗಿ ಮೂಲ ಸೌಕರ್ಯಗಳ ಆವಶ್ಯಕತೆ ಇದೆ ಎಂಬುದನ್ನು ಮತದಾರರು ಬಿಜೆಪಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

ಏಕವಚನದಲ್ಲಿ ಮಾತನಾಡುವುದು ಸಿದ್ದರಾಮಯ್ಯ ನಿಲ್ಲಿಸಲಿ
ಮೈಸೂರು: ರಾಜವಂಶಸ್ಥರಿಗೆ ಯಾವುದೇ ಪಕ್ಷ, ಜಾತಿ ಧರ್ಮದ ಅಡ್ಡಿ ಇಲ್ಲ. ಅವರು ಈಗ 1.50 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ. ಮುಖ್ಯಮಂತ್ರಿಗಳು 12 ದಿನ ಕ್ಯಾಂಪ್‌ ಹಾಕಿ ಮೈಸೂರಲ್ಲೇ ಮಲಗಿದ್ದರು. ಆದರೂ ಅವರ ದುರಹಂಕಾರದಿಂದ ಏನೂ ಆಗುವುದಿಲ್ಲ ಎಂದು ಎಂಎಲ್‌ಸಿ ಎಚ್‌. ವಿಶ್ವನಾಥ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ 1ರಿಂದ 9ಕ್ಕೆ ಬಂದಿದ್ದೇವೆ ಎಂದು ಸಿಎಂ ಹೇಳುತ್ತಿದ್ದಾರೆ. ಆದರೆ 28ಕ್ಕೆ 28 ಸ್ಥಾನ ಗೆಲ್ಲುತ್ತೇವೆ ಎನ್ನುತ್ತಿದ್ದರು, ಯಾಕೆ ಗೆಲ್ಲಲಿಲ್ಲ? ಎಂದು ಪ್ರಶ್ನಿಸಿದರು. ಮೈಸೂರಿನಲ್ಲಿ ಕಾಂಗ್ರೆಸ್‌ ಸೋಲು ರಾಜ್ಯ ಸರಕಾರದ ಮೇಲೆ ಜನರಿಗೆ ವಿಶ್ವಾಸವಿಲ್ಲ ಎಂಬುದರ ಧ್ಯೋತಕ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next