Advertisement

ರಾಜ್ಯದ ಜಿಲ್ಲಾ-ತಾಲೂಕು ಕೇಂದ್ರಗಳಲ್ಲೂ ಕ್ಯಾಂಟೀನ್‌?

11:27 AM Aug 21, 2017 | Team Udayavani |

ಬೆಂಗಳೂರು: “ಇಂದಿರಾ ಕ್ಯಾಂಟೀನ್‌’ ಸ್ಪಂದನೆಯಿಂದ ಪ್ರೇರಣೆಗೊಂಡಿರುವ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೆಂದ್ರಗಳಲ್ಲಿ ಈ ಯೋಜನೆ ವಿಸ್ತರಿಸಲು ಬೇಕಾಗುವ ಸಂಪನ್ಮೂಲದ ಬಗ್ಗೆ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದೆ.

Advertisement

ಅಷ್ಟೇ ಅಲ್ಲ ಸಮಾಜ ಕಲ್ಯಾಣ ಇಲಾಖೆಗೆ ಲಭ್ಯವಾಗುವ ಅನುದಾನದಲ್ಲಿ ಸ್ವಲ್ಪ ಭಾಗ ಇಂದಿರಾ ಕ್ಯಾಂಟೀನ್‌ಗೆ ವೆಚ್ಚ ಮಾಡುವ ಅವಕಾಶ ಇದೆಯೇ ಎಂಬುದರ ಬಗ್ಗೆಯೂ ಪರಿಶೀಲಿಸುವಂತೆ ನಿದೇಶನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ವಾರ್ಷಿಕ 25 ಸಾವಿರ ಕೋಟಿ ರೂ.ವರೆಗೆ ಅನುದಾನ ಲಭ್ಯವಾಗಲಿದ್ದು,  ಈ ಹಣ  ಇಂದಿರಾ ಕ್ಯಾಂಟೀನ್‌ನಂತಹ ಯೋಜನೆಗೆ ಬಳಕೆ ಮಾಡಬಹುದಾ? ಮಾಡಬಹುದಾದರೆ ಎಷ್ಟು ಪ್ರಮಾಣದಲ್ಲಿ ಮಾಡಬಹುದು? ಎಂಬಿತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡುವಂತೆ . ಜತೆಗೆ ಆರ್ಥಿಕ ಇಲಾಖೆಗೂ  ಈ ಬಗ್ಗೆ ಸಾಧಕ-ಬಾಧಕ ಪರಿಶೀಲಿಸಲು ತಿಳಿಸಲಾಗಿದೆ ಎಂದು ಹೇಳಲಾಗಿದೆ.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ ಪ್ರಾರಂಭಿಸಲು 1500 ರಿಂದ 2000 ಸಾವಿರ ಕೋಟಿ ರೂ.ವರೆಗೆ ವೆಚ್ಚ ಬರಬಹುದು ಎಂಬ ಅಂದಾಜು ಮಾಡಲಾಗಿದೆ. ಪ್ರಸ್ತುತ ಬಿಬಿಎಂಪಿಗೆ 100 ಕೋಟಿ ರೂ. ಮೂಲಸೌಕರ್ಯಕ್ಕೆ 200 ಕೋಟಿ ರೂ. ಊಟ-ತಿಂಡಿ ತಯಾರಿಕೆ, ಪೂರೈಕೆ ವೆಚ್ಚಕ್ಕೆ ನೀಡಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next