Advertisement

4 ತಾಲೂಕುಗಳಲ್ಲಿ ಶುರುವಾಗದ ಕ್ಯಾಂಟೀನ್‌

04:30 PM Jul 12, 2018 | |

ಮಂಡ್ಯ: ತಮಿಳುನಾಡಿನ ಅಮ್ಮ ಕ್ಯಾಂಟೀನ್‌ ಮಾದರಿಯಲ್ಲಿ ರಾಜ್ಯದಲ್ಲಿ ಆರಂಭಗೊಂಡ ಇಂದಿರಾ ಕ್ಯಾಂಟೀನ್‌ ಇನ್ನೂ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಆರಂಭವನ್ನೇ ಕಂಡಿಲ್ಲ. ಕಟ್ಟಡ ನಿರ್ಮಾಣ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ಅವುಗಳಿಗೆ ಚಾಲನೆ ನೀಡಲು ಸಾಧ್ಯವಾಗಿಲ್ಲ.

Advertisement

ಮಂಡ್ಯ, ಶ್ರೀರಂಗಪಟ್ಟಣ, ಮಳವಳ್ಳಿ ತಾಲೂಕುಗಳಲ್ಲಿ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಲಾಗಿದೆ. ಮದ್ದೂರು
ತಾಲೂಕಿನಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಆರಂಭ ವಿಳಂಬವಾಗುತ್ತಿದೆ. ಇನ್ನು ಕೆ.ಆರ್‌.ಪೇಟೆ, ನಾಗಮಂಗಲ, ಪಾಂಡವಪುರದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳದಿರುವುದರಿಂದ ಚಾಲನೆ ಸಿಕ್ಕಿಲ್ಲ. ಮಂಡ್ಯದ ಲೋಕೋಪಯೋಗಿ ಇಲಾಖೆ ಬಳಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಬಳಿ ಇಂದಿರಾ ಕ್ಯಾಂಟೀನ್‌ಗಳು ನಿರ್ಮಾಣಗೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‌ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ.

ಆರಂಭದಲ್ಲಿ ಆಹಾರವನ್ನು ಅಕ್ರಮವಾಗಿ ಹೋಟೆಲ್‌ ಗಳಿಗೆ ಸಾಗಿಸುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿ ದ್ದವಲ್ಲದೆ, ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 

ದೂರು ಬಂದಿಲ್ಲ: ಆನಂತರದಲ್ಲಿ ಬೆಳಗಿನ ಉಪಾಹಾರ ಹಾಗೂ ಮಧ್ಯಾಹ್ನದ ಊಟದ ಗುಣಮಟ್ಟ ಕುರಿತು ಸಾರ್ವಜನಿಕರಿಂದ ಅಪಸ್ವರಗಳು ಕೇಳಿಬಂದ ಹಿನ್ನೆಲೆಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿ ಊಟ ಸೇವಿಸುವ ಮೂಲಕ ಪರಿಶೀಲನೆ ನಡೆಸಿದ್ದರು. ಬಳಿಕ ಇಂದಿರಾ ಕ್ಯಾಂಟೀನ್‌ ಬಗ್ಗೆ ಹೆಚ್ಚಿನ ದೂರುಗಳು ಕೇಳಿಬಂದಿಲ್ಲ.

ಖಾಸಗಿ ಹೋಟೆಲ್‌ಗ‌ಳಲ್ಲಿ ದರ ಇಳಿಕೆ: ಪ್ರತಿನಿತ್ಯ ಸಾರ್ವಜನಿಕರಿಗೆ ಸರ್ಕಾರ ನಿಗದಿಪಡಿಸಿರುವ ಸಂಖ್ಯೆಗೆ ಅನುಗುಣವಾಗಿ ಊಟ ವಿತರಣೆ ಮಾಡಲಾಗುತ್ತಿದೆ. ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಊಟ ದೊರೆಯುತ್ತಿದ್ದು, ಇಂದಿರಾ ಕ್ಯಾಂಟೀನ್‌ ಪರಿಣಾಮವಾಗಿ ಕೆಲವೊಂದು ಖಾಸಗಿ ಹೋಟೆಲ್‌ಗ‌ಳೂ 10 ರೂ.ಪಾಯಿಗೆ ತಿಂಡಿ ಮತ್ತು ಊಟ ನೀಡಲು ಆರಂಭಿಸಿವೆ.

Advertisement

ಮದ್ದೂರು ಪಟ್ಟಣದ ಹೂವಿನ ಮಾರುಕಟ್ಟೆ ಸ್ಥಾಪನೆಯಾಗಿರುವ ಇಂದಿರಾ ಕ್ಯಾಂಟೀನ್‌ ಕಟ್ಟಡ ನಿರ್ಮಾಣ ಪೂರ್ಣಗೊಂಡಿದೆ. ಒಳಗಿನ ಕೆಲಸವಷ್ಟೇ ಬಾಕಿ ಉಳಿದಿದೆ. ಅದರಿಂದ ಇನ್ನೂ ಚಾಲನೆ ಸಿಗದೆ ನಿರಾಶ್ರಿತರ ತಾಣವಾಗಿ ರೂಪಾಂತರಗೊಂಡಿದೆ. ಇನ್ನೊಂದು ವಾರದೊಳಗೆ ಕೆಲಸ ಪೂರ್ಣಗೊಳ್ಳಲಿದ್ದು ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಪಾಂಡವಪುರ, ಕೆ.ಆರ್‌.ಪೇಟೆ, ನಾಗಮಂಗಲ ತಾಲೂಕುಗಳಲ್ಲೂ ಕಟ್ಟಡ ಕಾಮಗಾರಿ ನಡೆಯುತ್ತಿ ರುವುದರಿಂದ ಅಲ್ಲಿಯೂ ಇಂದಿರಾ ಕ್ಯಾಂಟೀನ್‌ ಆರಂಭಕ್ಕೆ ಅಡ್ಡಿಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಕಟ್ಟಡ ನಿರ್ಮಾಣ ಕಾಮಗಾರಿ ಮುಗಿಸಲು ಸಾಧ್ಯವಾಗಿರಲಿಲ್ಲ. ಕೆಲವೊಂದು ತಾಲೂಕುಗಳಲ್ಲಿ ಕ್ಯಾಂಟೀನ್‌ ಜಾಗದ ವಿಚಾರವಾಗಿ ವಿವಾದ ಸೃಷ್ಟಿಯಾಗಿ ಸ್ಥಳಗಳನ್ನು ಗುರುತಿಸುವುದು ಸ್ವಲ್ಪ ತಡವಾಯಿತು. ಆದ ಕಾರಣ ಕ್ಯಾಂಟೀನ್‌ ಆರಂಭಕ್ಕೆ ಹಿನ್ನಡೆಯಾಗಿದೆ. ಮುಂದಿನ ಒಂದು ತಿಂಗಳೊಳಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಕ್ಯಾಂಟೀನ್‌ ಆರಂಭಿಸುವುದಾಗಿ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆಯಿಂದ ಇಂದಿರಾ ಕ್ಯಾಂಟೀನ್‌ ಕಟ್ಟಡ ನಿರ್ಮಾಣ ವಿಳಂಬವಾಯಿತು. ಕೆಲವೊಂದು ತಾಲೂಕುಗಳಲ್ಲಿ ಜಾಗದ ಸಮಸ್ಯೆಯೂ ಎದುರಾಗಿತ್ತು. ಕ್ಯಾಂಟೀನ್‌ ಗೆ ಗುರುತಿಸಲಾಗಿದ್ದ ಸ್ಥಳಗಳ ಬಗ್ಗೆ ಹಲವರಿಂದ
ವಿರೋಧ ವ್ಯಕ್ತವಾಯಿತು. ಮಂಡ್ಯ, ಶ್ರೀರಂಗಪಟ್ಟಣ, ಮಳವಳ್ಳಿಯಲ್ಲಿ ಕ್ಯಾಂಟೀನ್‌ ಕಾರ್ಯನಿರ್ವಹಿಸುತ್ತಿದ್ದು, ಉಳಿದೆಡೆ ಕಟ್ಟಡದ ಸಣ್ಣ-ಪುಟ್ಟ ಕೆಲಸಗಳು ಬಾಕಿ ಉಳಿದಿವೆ. ಅವುಗಳನ್ನು ಪೂರ್ಣಗೊಳಿಸಿ ಕ್ಯಾಂಟೀನ್‌ಗೆ ಚಾಲನೆ
ನೀಡಲಾಗುವುದು. ಟೆಂಡರ್‌ದಾರರನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
   ಎನ್‌.ಮಂಜುಶ್ರೀ, ಜಿಲ್ಲಾಧಿಕಾರಿ

ಕ್ಯಾಂಟೀನ್‌ನಲ್ಲಿ ಕಡಿಮೆ ಬೆಲೆಯಲ್ಲಿ ನೀಡುವ ಊಟ ಚೆನ್ನಾಗಿರುತ್ತದೆ. ಆದರೆ, ಕೆಲವೊಮ್ಮೆ ವಾರದಲ್ಲಿ ನಿಗದಿಪಡಿಸಿದ ರೀತಿಯಲ್ಲಿ ತಿಂಡಿ ಹಾಗೂ ಊಟ ನೀಡುವುದಿಲ್ಲ. ಸ್ವತ್ಛತೆ ಬಗ್ಗೆ ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು. ಕ್ಯಾಂಟೀನ್‌ನಿಂದ ಕೂಲಿ ಕಾರ್ಮಿಕರು, ಬಡವರಿಗೆ ಹೆಚ್ಚಿನ ಅನುಕೂಲವಾಗಿದೆ. ಕ್ಯಾಂಟೀನ್‌ನನ್ನು
ಇನ್ನಷ್ಟು ಉತ್ತಮಪ ಡಿಸುವ ಕೆಲಸ ಮಾಡಬೇಕಿದೆ.
   ಸಿದ್ದರಾಜು, ಕೂಲಿ ಕಾರ್ಮಿಕ, ಮಂಡ್ಯ

 ಮಂಡ್ಯ ಮಂಜುನಾಥ್‌

Advertisement

Udayavani is now on Telegram. Click here to join our channel and stay updated with the latest news.

Next