Advertisement

ಕ್ಯಾಂಟರ್- ಲಾರಿ ಮುಖಾಮುಖಿ ಢಿಕ್ಕಿ: ಕ್ಯಾಂಟರ್ ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು

03:32 PM Jul 05, 2020 | keerthan |

ವಿಜಯಪುರ: ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಂಟರ್ ಚಾಲಕ, ಕ್ಲೀನರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.

Advertisement

ಭಾನುವಾರ ತಡರಾತ್ರಿ ಚಿಕ್ಕಸಿಂದಗಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಢಿಕ್ಕಿಯಾಗಿವೆ. ಭೀಕರ ದುರಂತದಲ್ಲಿ ಕ್ಯಾಂಟರ್ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕ್ಯಾಂಟರ್ ಚಾಲಕ ಹಾಗೂ ಕ್ಲಿನರ್ ನ ಮೃತದೇಹಗಳು ವಾಹನದಲ್ಲಿ ಸಿಲುಕಿದ್ದು, ಶವಗಳನ್ನು ಹೊರ ತೆಗೆಯಲು ಪೊಲಿಸರು ಹರಸಾಹಸ ಪಡಬೇಕಾಯಿತು.

ಘಟನೆಯಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯಾಳಾಗಿದ್ದು, ಚಿಕಿತ್ಸೆಗೆ ಸಿಂದಗಿ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next