Advertisement

ರಾಜ್ಯ ಗೆಲ್ಲಲು ರಾಜಧಾನಿ ಮುಖ್ಯ: ಎಚ್‌ಡಿಕೆ ಅಭಿಮತ

09:32 PM Nov 16, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕಾದರೆ ಬಿಬಿಎಂಪಿ ಗೆಲ್ಲುವುದು ಮತ್ತು ಬೆಂಗಳೂರು ನಗರದಲ್ಲಿ ಪಕ್ಷ ಸಂಘಟಿಸುವುದು ಮುಖ್ಯ ಎಂದು ಪ್ರತಿಪಾದಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಈ ನಿಟ್ಟಿನಲ್ಲಿ ಪಕ್ಷ ಕಟ್ಟಬೇಕು ಎಂದು ಕರೆ ನೀಡಿದ್ದಾರೆ.

Advertisement

ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭನವದಲ್ಲಿ ನಡೆಯುತ್ತಿರುವ ಜನತಾ ಪರ್ವ 1.0 ಕಾರ್ಯಾಗಾರ “ಜನತಾ ಸಂಗಮ’ದ ಏಳನೇ ದಿನ ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು, ಪಾಲಿಕೆ ಮಾಜಿ ಸದಸ್ಯರು ಹಾಗೂ ಆಯ್ದ ಮುಖಂಡರೊಂದಿಗೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಚರ್ಚಿಸಿದ ಅವರು, ಮುಂಬರುವ ಬಿಬಿಎಂಪಿ ಚುನಾವಣೆ ಹಾಗೂ 2023ರ ವಿಧಾನಸಭೆ ಚುನಾವಣೆಗೆ ಬೆಂಗಳೂರು ನಗರ ನಮ್ಮ ಪಕ್ಷಕ್ಕೆ ಬಹಳ ಮುಖ್ಯ. ಯಾರೇ ಆಗಲಿ, ನನ್ನ ಜತೆ ಮುಕ್ತವಾಗಿ ಚರ್ಚೆ ಮಾಡಬಹುದು. ಭೇಟಿಯಾಗಿ ಮಾತುಕತೆ ನಡೆಸಬಹುದು.ಎಲ್ಲರಿಗೂ ಮುಕ್ತ ಸ್ವಾಗತವಿದೆ.

2023ರಲ್ಲಿ ಜೆಡಿಎಸ್‌ ಸ್ವತಂತ್ರ ಸರ್ಕಾರ ನಡೆಸಬೇಕಾದರೆ ಬಿಬಿಎಂಪಿ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲೇಬೇಕು ಎಂದು ಹೇಳಿದರು.

ಇದನ್ನೂ ಓದಿ:ನಷ್ಟದ ಸುಳಿಯಲ್ಲಿದ್ದ ರೈತನ ಕೈಹಿಡಿದ ಗುಲಾಬಿ

ಈಗಾಗಲೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪಂಚರತ್ನ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದೇನೆ. ಬೆಂಗಳೂರು ನಗರ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಇದುವರೆಗೆ ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಜಾರಿ ಮಾಡಿದ ಯೋಜನೆಗಳನ್ನು ನಗರದ ಜನರಿಗೆ ತಿಳಿಸಬೇಕು. ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ ಎಂದು ಕುಮಾರಸ್ವಾಮಿ ಅವರು ಪದಾಧಿಕಾರಿಗಳಿಗೆ ಸೂಚಿಸಿದರು.

Advertisement

ಶಾಸಕ ಬಂಡೆಪ್ಪ ಕಾಶೆಂಪೂರ, ವಿಧಾನಪರಿಷತ್‌ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶ್‌ ಗೌಡ, ವಿಧಾನಪರಿಷತ್‌ ಮಾಜಿ ಸದಸ್ಯ ಸರವಣ, ಜೆಡಿಎಸ್‌ ನಗರ ಅಧ್ಯಕ್ಷ ಆರ್‌.ಪ್ರಕಾಶ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next